ವಿಶ್ವಸಂಸ್ಥೆ ತನ್ನ ಸಾಮರ್ಥ್ಯಕ್ಕೆ ತಕ್ಕ ಕೆಲಸ ಮಾಡುತ್ತಿಲ್ಲ: ಡೊನಾಲ್ಡ್ ಟ್ರಂಪ್

ವಿಶ್ವಸಂಸ್ಥೆ ವಿರುದ್ಧ ಅಮೆರಿಕ ನೂತನ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ವಾಗ್ದಾಳಿ ನಡೆಸಿದ್ದು, ಸಮಸ್ಯೆಯನ್ನು ಪರಿಹರಿಸುವ ಬದಲು ವಿಶ್ವಸಂಸ್ಥೆ ಸಮಸ್ಯೆಗಳನ್ನು ಹುಟ್ಟುಹಾಕುತ್ತಿದೆ...
ಅಮೆರಿಕ ನೂತನ ಅಧ್ಯಕ್ಷ ಡೊನಾಲ್ಡ್ ಟ್ರಂಪ್
ಅಮೆರಿಕ ನೂತನ ಅಧ್ಯಕ್ಷ ಡೊನಾಲ್ಡ್ ಟ್ರಂಪ್

ವಾಷಿಂಗ್ಟನ್: ವಿಶ್ವಸಂಸ್ಥೆ ವಿರುದ್ಧ ಅಮೆರಿಕ ನೂತನ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ವಾಗ್ದಾಳಿ ನಡೆಸಿದ್ದು, ಸಮಸ್ಯೆಯನ್ನು ಪರಿಹರಿಸುವ ಬದಲು ವಿಶ್ವಸಂಸ್ಥೆ ಸಮಸ್ಯೆಗಳನ್ನು ಹುಟ್ಟುಹಾಕುತ್ತಿದೆ ಎಂದು ಹೇಳಿದ್ದಾರೆ.

ಈ ಕುರಿತಂತೆ ಫ್ಲೋರಿಡಾದಲ್ಲಿ ಮಾತನಾಡಿರುವ ಅವರು, ವಿಶ್ವಸಂಸ್ಥೆ ಅತ್ಯಂತ ಹೆಚ್ಚಿನ ಸಾಮರ್ಥ್ಯವನ್ನು ಹೊಂದಿದ್ದು, ತನ್ನ ಸಾಮರ್ಥ್ಯಕ್ಕೆ ತಕ್ಕಂತೆ ವಿಶ್ವಸಂಸ್ಥೆ ಕೆಲಸವನ್ನು ಮಾಡುತ್ತಿಲ್ಲ. ಯಾವಾಗಾಲಾದರೂ ವಿಶ್ವಸಂಸ್ಥೆ ಸಮಸ್ಯೆ ಬಗೆಹರಿಸಿರುವುದನ್ನು ನೋಡಿದ್ದೀರಾ? ಅವರು ಸಮಸ್ಯೆಯನ್ನು ಬಗೆಹರಿಸುವುದಿಲ್ಲ. ಸಮಸ್ಯೆಯನ್ನು ಹುಟ್ಟುಹಾಕುತ್ತಾರೆಂದು ಹೇಳಿದ್ದಾರೆ.

ತಮ್ಮ ಅಧಿಕಾರಾವಧಿಯಲ್ಲಿ ಅಮೆರಿಕ ವಿಶ್ವಸಂಸ್ಥೆಯೊಂದಿಗೆ ತನ್ನ ಕಾರ್ಯವನ್ನು ಮುಂದುವರೆಸಲಿದೆಯೇ ಎಂಬ ಮಾಧ್ಯಮದವರ ಪ್ರಶ್ನೆ ಉತ್ತರಿಸಿರುವ ಅವರು, ವಿಶ್ವಸಂಸ್ಥೆ ತನ್ನ ಸಾಮರ್ಥ್ಯಕ್ಕೆ ತಕ್ಕಂತೆ ಕೆಲಸ ಮಾಡಿದರೆ, ಅದು ದೊಡ್ಡ ವಿಚಾರವಾಗಿರುತ್ತದೆ. ಇಲ್ಲದೇ ಹೋದರೆ, ಸಮಯ ಹಾಗೂ ಹಣ ಎರಡೂ ವ್ಯರ್ಥವಾಗುತ್ತದೆ ಎಂದಿದ್ದಾರೆ.

ಈ ಹಿಂದಷ್ಟೇ ವಿಶ್ವಸಂಸ್ಥೆಯ ಕುರಿತಂತೆ ಟ್ರಂಪ್ ಟ್ವಿಟರ್ ನಲ್ಲಿ ಹೇಳಿಕೆಯೊಂದನ್ನು ನೀಡಿದ್ದರು. ಇಸ್ರೇಲ್ ವಿರುದ್ಧ ನಿರ್ಣಯ ಕೈಗೊಂಡಿಲ್ಲ ಭದ್ರತಾ ಮಂಡಳಿ ಕುರಿತಂತೆ ಟೀಕೆ ವ್ಯಕ್ತಪಡಿಸಿದ್ದರು. ಇಸ್ರೇಲ್ ದೇಶವನ್ನು ನಿರ್ಲಕ್ಷ್ಯತನದಿಂದ ಹಾಗೂ ಅಗೌರವಯುತವಾಗಿ ನೋಡುತ್ತಿರುವುದನ್ನು ಮುಂದುವರೆಸುವುದು ಸರಿಯಲ್ಲ. ಅಮೆರಿಕದೊಂದಿಗೆ ಇಸ್ರೇಲ್ ಉತ್ತಮ ಸಂಬಂಧವನ್ನು ಹೊಂದಿತ್ತು ಎಂದು ಹೇಳಿದ್ದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com