ದೆಹಲಿ ಲೆಫ್ಟಿನೆಂಟ್ ಗೌರ್ನರ್ ಆಗಿ ಪ್ರಮಾಣ ವಚನ ಸ್ವೀಕರಿಸಿದ ಅನಿಲ್ ಬೈಜಲ್

ಮಾಜಿ ಕೇಂದ್ರ ಗೃಹ ಇಲಾಖೆಯ ಅನಿಲ್ ಬೈಜಲ್ ಡಿ.31 ರಂದು ದೆಹಲಿಯ ಲೆಫ್ಟಿನೆಂಟ್ ಗೌರ್ನರ್ ಆಗಿ ಅಧಿಕಾರ ವಹಿಸಿಕೊಂಡಿದ್ದಾರೆ.
ಅನಿಲ್ ಬೈಜಲ್
ಅನಿಲ್ ಬೈಜಲ್
ನವದೆಹಲಿ: ಮಾಜಿ ಕೇಂದ್ರ ಗೃಹ ಇಲಾಖೆಯ ಅನಿಲ್ ಬೈಜಲ್ ಡಿ.31 ರಂದು ದೆಹಲಿಯ ಲೆಫ್ಟಿನೆಂಟ್ ಗೌರ್ನರ್ ಆಗಿ ಅಧಿಕಾರ ವಹಿಸಿಕೊಂಡಿದ್ದಾರೆ. 
ದೆಹಲಿಯ ಹೈಕೋರ್ಟ್ ಮುಖ್ಯ ನ್ಯಾಯಾಧೀಶರಾದ ನ್ಯಾ.ಜಿ ರೋಹಿಣಿ ಲೆಫ್ಟಿನೆಂಟ್ ಗೌರ್ನರ್ ಗೆ ಗೌಪ್ಯತಾ ವಿಧಿಯನ್ನು ಬೋಧಿಸಿದರು.  1969 ಬ್ಯಾಚ್ ನ ಐಎಎಸ್ ಅಧಿಕಾರಿಯಾಗಿರುವ ಬೈಜಲ್ 2006 ರಲ್ಲಿ ನಿವೃತ್ತಿ ಹೊಂದಿದ್ದರು. ಡಿ.22 ರಂದು ನಜೀಬ್ ಜಂಗ್ ಅವರು ದೆಹಲಿ ಲೆಫ್ಟಿನೆಂಟ್ ಗೌರ್ನರ್ ಹುದ್ದೆಗೆ ರಾಜೀನಾಮೆ ನೀಡಿದ ಬಳಿಕ ರಾಷ್ಟ್ರಪತಿಗಳು ಅನಿಲ್ ಬೈಜಲ್ ಅವರ ನೇಮಕಕ್ಕೆ ಒಪ್ಪಿಗೆ ನೀಡಿದ್ದರು. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com