ಪಟಾಕಿ ತಯಾರಿಕಾ ಕಾರ್ಖಾನೆಯಲ್ಲಿ ಸ್ಫೋಟ: ಮೂವರ ಸಾವು

ಪಟಾಕಿ ಉತ್ಪಾದನಾ ಕಾರ್ಖಾನೆಯಲ್ಲಿ ಸಂಭವಿಸಿದ ಸ್ಫೋಟದಿಂದಾಗಿ ಮೂವರು ಸಾವನ್ನಪ್ಪಿ ಸುಮಾರು 20 ಮಂದಿ ಗಾಯಗೊಂಡಿರುವ ಘಟನೆ ಆಂಧ್ರ ಪ್ರದೇಶದ ನೆಲ್ಲೂರು ...
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ

ನೆಲ್ಲೂರು: ಪಟಾಕಿ ಉತ್ಪಾದನಾ ಕಾರ್ಖಾನೆಯಲ್ಲಿ ಸಂಭವಿಸಿದ ಸ್ಫೋಟದಿಂದಾಗಿ ಮೂವರು ಸಾವನ್ನಪ್ಪಿ ಸುಮಾರು 20 ಮಂದಿ ಗಾಯಗೊಂಡಿರುವ ಘಟನೆ ಆಂಧ್ರ ಪ್ರದೇಶದ ನೆಲ್ಲೂರು ಜಿಲ್ಲೆಯ ಪೊರ್ಲುಕಟ್ಟಾದಲ್ಲಿ ನಡೆದಿದೆ.

ಭಾಸ್ಕರ್, ಪೋಲಯ್ಯ, ಮತ್ತು ನಾಗರಾಜು ಮೃತ ದುರ್ದೈವಿಗಳು. ದುರಂತದಲ್ಲಿ ಸುಮಾರು 8 ಮಂದಿ ತೀವ್ರ ಗಾಯಗೊಂಡಿದ್ದು ಅವರನ್ನು ಸ್ಥಳೀಯ  ಆಸ್ಪತ್ರೆಗೆ ದಾಖಲಿಸಲಾಗಿದೆ.ಶೇ. 60 ರಷ್ಟು ಸುಟ್ಟ ಗಾಯಗಳಿಂದ ಬಳಲುತ್ತಿದ್ದಾರೆ.

ಪೊರ್ಲು ಕಟ್ಟಾದಲ್ಲಿ ಸುಮಾರು 10 ಅಕ್ರಮ ಪಟಾಕಿ ಕಾರ್ಖಾನೆಗಳು ಕಾರ್ಯ ನಿರ್ವಹಿಸುತ್ತಿವೆ ಎಂದು ಸ್ಥಳೀಯರು ಆರೋಪಿಸಿದ್ದಾರೆ. ಶನಿವಾರ ಬೆಳಗ್ಗೆ ಸುಮಾರು 10 ಗಂಟೆ ಸುಮಾರಿಗೆ ಈ ಸ್ಫೋಟ ಸಂಭವಿಸಿದೆ. ಕಾರ್ಖಾನೆಯಲ್ಲಿ 25 ಕಾರ್ಮಿಕರು ಕೆಲಸ ಮಾಡುತ್ತಿದ್ದರು.

ವಿಷಯ ತಿಳಿದ ಕೂಡಲೇ ಸ್ಥಳಕ್ಕೆ ಧಾವಿಸಿದ ಅಗ್ನಿಶಾಮಕ ದಳ ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com