ವೈದ್ಯರ ನಿರ್ಲಕ್ಷ್ಯ: ಶೌಚಾಲಯದಲ್ಲೇ ಮಗುವಿಗೆ ಜನ್ಮ ನೀಡಿದ ಮಹಿಳೆ

ವೈದ್ಯರ ನಿರ್ಲಕ್ಷ್ಯದಿಂದ ದಲಿತ ಮಹಿಳೆಯೊಬ್ಬಳು ಆಸ್ಪತ್ರೆಯ ಶೌಚಾಲಯದಲ್ಲೇ ಮಗುವಿಗೆ ಜನ್ಮ ನೀಡಿರುವ ಘಟನೆ ಕೇರಳದ ಮಲಾಪ್ಪುರಂ ಸರ್ಕಾರಿ ...
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ

ಮಲಾಪ್ಪುರಂ: ವೈದ್ಯರ ನಿರ್ಲಕ್ಷ್ಯದಿಂದ ದಲಿತ ಮಹಿಳೆಯೊಬ್ಬಳು ಆಸ್ಪತ್ರೆಯ ಶೌಚಾಲಯದಲ್ಲೇ ಮಗುವಿಗೆ ಜನ್ಮ ನೀಡಿರುವ ಘಟನೆ ಕೇರಳದ ಮಲಾಪ್ಪುರಂ ಸರ್ಕಾರಿ ಮಾಂಜೇರಿ ಮೆಡಿಕಲ್ ಕಾಲೇಜಿನಲ್ಲಿ ನಡೆದಿದೆ.

ಹೆರಿಗೆಗಾಗಿ ಮಹಿಳೆ ಶುಕ್ರವಾರ ಆಸ್ಪತ್ರೆಗೆ ದಾಖಲಾಗಿದ್ದರು. ಮಹಿಳೆಗೆ ಹೆರಿಗೆ ನೋವು ಕಾಣಿಸಿಕೊಂಡಿದೆ. ಈ ವೇಳೆ ಆಕೆ  ಶೌಚಾಲಯಕ್ಕೆ ಹೋಗಬೇಕೆಂದು ಆಸ್ಪತ್ರೆ ಸಿಬ್ಬಂದಿ ಬಳಿ ಕೇಳಿದ್ದಾಳೆ. ಆದರೆ ಸಿಬ್ಬಂದಿ ನಿರ್ಲಕ್ಷ್ಯ ವಹಿಸಿದ್ದಾರೆ. ಶೌಚಾಲಯಕ್ಕೆ ತೆರಳಿದ್ದ ಆಕೆ ಅಲ್ಲಿಯೇ ಮಗುವಿಗೆ ಜನ್ಮ ವಿತ್ತಿದ್ದಾಳೆ. ಎಂದು ಮಹಿಳೆಯರ ಸಂಬಂಧಿಕರು ಆರೋಪಿಸಿದ್ದಾರೆ.

ಆದರೆ ಆಸ್ಪತ್ರೆ ಸಿಬ್ಬಂದಿ ಈ ಆರೋಪವನ್ನು ನಿರಾಕರಿಸಿದ್ದಾರೆ.ಈ ಸಂಬಂಧ ಮಹಿಳೆ ಸಂಬಂಧಿಕರು ದೂರು ದಾಖಲಿಸಿದ್ದಾರೆ. ಆರೋಗ್ಯ ಸಚಿವೆ ಕೆ,ಕೆ ಶೈಲಜಾ ತನಿಖೆಗೆ ಆದೇಶಿಸಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com