
ನವದೆಹಲಿ: ದೆಹಲಿಯಲ್ಲಿ ಪೌರ ಸಿಬ್ಬಂದಿ ನಡೆಸುತ್ತಿರುವ ಪ್ರತಿಭಟನೆ ವಿಷಯಕ್ಕೆ ಸಂಬಂಧಿಸಿದಂತೆ ಮೂರು ಸ್ಥಳಿಯ ಸಂಸ್ಥೆಗಳಿಗೆ ನಿರ್ದೇಶನ ನೀಡಲು ಸುಪ್ರೀಂ ಕೋರ್ಟ್ ನಿರಾಕರಿಸಿದೆ.
ಪೌರ ಸಿಬ್ಬಂದಿಗಳು ಪ್ರತಿಭಟನೆ ವಾಪಸ್ ಪಡೆಯುವುದಕ್ಕೆ ಕ್ರಮ ಕೈಗೊಳ್ಳುವಂತೆ ಸುಪ್ರೀಂ ಕೋರ್ಟ್ ಸ್ಥಳೀಯ ಸಂಸ್ಥೆಗಳಿಗೆ ನಿರ್ದೇಶನ ನೀಡಬೇಕೆಂದು ಮನವಿ ಮಾಡಿ ಸುಪೀಂ ಕೋರ್ಟ್ ಗೆ ಪಿಐಎಲ್ ಸಲ್ಲಿಸಲಾಗಿತ್ತು ಈ ವಿಷಯವನ್ನು ದೆಹಲಿ ಹೈಕೋರ್ಟ್ ನಲ್ಲಿ ಪ್ರಶ್ನಿಸಿ ಎಂದು ವಿಚಾರಣೆ ವೇಳೆ ಸುಪ್ರೀಂ ಕೋರ್ಟ್ ನ್ಯಾ. ಟಿಎಸ್ ಠಾಕೂರ್ ಹೇಳಿದ್ದಾರೆ.
ಪಿಐಎಲ್ ಸಲ್ಲಿಸಿದ್ದ ಅರ್ಜಿದಾರರ ಪರ ವಾದ ಮಾಡಿದ ವಕೀಲ ರಾಹುಲ್ ಬಿರ್ಲಾ, ದೆಹಲಿ ಹೈಕೋರ್ಟ್ ಸ್ಥಳೀಯ ಸಂಸ್ಥೆಗಳಿಗೆ ನಿರ್ದೇಶನ ನೀಡದೆಯೇ ಪ್ರಕರಣದ ವಿಚಾರಣೆಯನ್ನು ಮುಂದೂಡಿದೆ ಎಂದು ಹೇಳಿದರು. "ಇಂತಹ ಅರ್ಜಿಗಳನ್ನು ಸುಪ್ರೀಂ ಕೋರ್ಟ್ ನಲ್ಲೇಕೆ ವಿಚಾರಣೆಗೆ ತರುತ್ತೀರಾ? ದೆಹಲಿ ಕೋರ್ಟ್ ನಲ್ಲಿ ಇತ್ಯರ್ಥಗೊಳಿಸಿ ಎಂದು ನ್ಯಾ.ಟಿಎಸ್ ಠಾಕೂರ್ ಹೇಳಿದ್ದಾರೆ. ದೆಹಲಿ ಮುನಿಸಿಪಲ್ ಕಾರ್ಪೊರೇಶನ್‌ನ ಶುಚಿತ್ವ ನಿರ್ವಹಣೆಯ ಪೌರ ಸಿಬ್ಬಂದಿ ಕೈಗೊಂಡಿರುವ ಮುಷ್ಕರದಿಂದಾಗಿ ದೆಹಲಿಯಲ್ಲಿ ರಾಶಿ ರಾಶಿ ಕಸ ಬಿದ್ದಿದೆ.
Advertisement