ಹೊಸ ರಾಷ್ಟ್ರೀಯ ಶಿಕ್ಷಣ ನೀತಿ ಬಗ್ಗೆ ಫೆ.12 ರಂದು ಶಿಕ್ಷಣ ತಜ್ಞರ ಅಭಿಪ್ರಾಯಪಡೆಯಲಿರುವ ಕೇಂದ್ರ ಸರ್ಕಾರ

ಹೊಸದಾಗಿ ತಯಾರಿಸಲಾಗಿರುವ ರಾಷ್ಟ್ರೀಯ ಶಿಕ್ಷಣ ನೀತಿಯ ಬಗ್ಗೆ ಕೇಂದ್ರ ಸರ್ಕಾರ ಅಂತಿಮವಾಗಿ ತಜ್ಞರ ಅಭಿಪ್ರಾಯವನ್ನು ಪಡೆಯಲಿದೆ.
ಕೇಂದ್ರ ಸರ್ಕಾರ (ಸಾಂಕೇತಿಕ ಚಿತ್ರ)
ಕೇಂದ್ರ ಸರ್ಕಾರ (ಸಾಂಕೇತಿಕ ಚಿತ್ರ)

ನವದೆಹಲಿ: ಹೊಸದಾಗಿ ತಯಾರಿಸಲಾಗಿರುವ ರಾಷ್ಟ್ರೀಯ ಶಿಕ್ಷಣ ನೀತಿಯ ಬಗ್ಗೆ ಕೇಂದ್ರ ಸರ್ಕಾರ ಅಂತಿಮವಾಗಿ ತಜ್ಞರ ಅಭಿಪ್ರಾಯವನ್ನು ಪಡೆಯಲಿದೆ.
ಶಿಕ್ಷಣ ವ್ಯವಸ್ಥೆಯ ಸುಧಾರಣೆ ಬಗ್ಗೆ ಪ್ರಾಧ್ಯಾಪಕರ ಜತೆ ಕೇಂದ್ರ ಸರ್ಕಾರದ ಸಚಿವರು ಫೆ.12 ರಂದು ನವದೆಹಲಿಯ ವಿಜ್ಞಾನ ಭವನದಲ್ಲಿ ಚರ್ಚೆ ನಡೆಸಲಿದ್ದಾರೆ. ಇದೇ ವೇಳೆ ವಿದ್ಯಾಭಾರತಿ ಶಾಲೆಗಳ ವಿದ್ಯಾರ್ಥಿಗಳೊಂದಿಗೆ ಮಾನವ ಸಂಪನ್ಮೂಲ ಅಭಿವೃದ್ಧಿ ಇಲಾಖೆ ಸಚಿವೆ ಸ್ಮೃತಿ ಇರಾನಿ ಸಂವಾದ ನಡೆಸಲಿದ್ದಾರೆ. ಫೆ.11 ರಂದು ಪ್ರಾರಂಭವಾಗಲಿರುವ ಈ ಕಾರ್ಯಕ್ರಮ ಫೆ.13 ವರೆಗೆ ನಡೆಯಲಿದೆ.       
1986 ರಲ್ಲಿ ರೂಪಿಸಲಾಗಿದ್ದ ರಾಷ್ಟ್ರೀಯ ಶಿಕ್ಷಣ ನೀತಿಗೆ 1992 ರಲ್ಲಿ ಕೆಲವೊಂದು ಬದಲಾವಣೆ ಮಾಡಲಾಗಿತ್ತು. ಜಾಗತಿಕವಾಗಿ ಶಿಕ್ಷಣ ನೀತಿಗಳಲ್ಲಿ ಬದಲಾವಣೆಗಳಾಗಿರುವ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರ ಹೊಸದಾಗಿ ರಾಷ್ಟ್ರೀಯ ಶಿಕ್ಷಣ ನೀತಿಯನ್ನು ರೂಪಿಸಲಾಗುತ್ತಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com