ಕೇಂದ್ರ ಸರ್ಕಾರ ರಾಮಸೇತು ಒಡೆಯಲು ಮುಂದಾದರೆ ಕೋರ್ಟ್ ಗೆ ಬನ್ನಿ: ಸುಬ್ರಹ್ಮಣಿಯನ್ ಸ್ವಾಮಿಗೆ ಸುಪ್ರೀಂ ಕೋರ್ಟ್

ಕೇಂದ್ರ ಸರ್ಕಾರವೇನಾದರೂ ರಾಮಸೇತುವಿಗೆ ಹಾನಿಯುಂತಾಗುವ ರೀತಿ ನಡೆದುಕೊಂಡರೆ ಅಗಾ ಸುಪ್ರೀಂ ಕೋರ್ಟ್ ನಲ್ಲಿ ಪ್ರಶ್ನಿಸಿ ಎಂದು ಕೋರ್ಟ್ ಹೇಳಿದೆ.
ಸುಪ್ರೀಂ ಕೋರ್ಟ್
ಸುಪ್ರೀಂ ಕೋರ್ಟ್

ನವದೆಹಲಿ: ರಾಮಸೇತು ವಿಷಯದಲ್ಲಿ ಕೇಂದ್ರ ಸರ್ಕಾರ ತನ್ನ ನಿಲುವು ಸ್ಪಷ್ಟಪಡಿಸಬೇಕೆಂದು ಆಗ್ರಹಿಸಿ ಬಿಜೆಪಿ ಮುಖಂಡ ಸುಬ್ರಹ್ಮಣಿಯನ್ ಸ್ವಾಮಿ ಸಲ್ಲಿಸಿದ್ದ ಅರ್ಜಿ ವಿಚಾರಣೆಯನ್ನು ತ್ವರಿತವಾಗಿ ನಡೆಸಲು ಸುಪ್ರೀಂ ಕೋರ್ಟ್ ನಿರಾಕರಿಸಿದೆ.
ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಾಲಯ, ರಾಮಸೇತು ವಿಷಯದಲ್ಲಿ ಕೇಂದ್ರ ಸರ್ಕಾರ ಈಗಾಗಲೇ ತನ್ನ ನಿಲುವನ್ನು ಸ್ಪಷ್ಟಪಡಿಸಿದೆ. ಒಂದು ವೇಳೆ ನಿಲುವನ್ನು ಬದಿಗೊತ್ತಿ ಕೇಂದ್ರ ಸರ್ಕಾರವೇನಾದರೂ ರಾಮ ಸೇತುವಿಗೆ  ಹಾನಿಯುಂತಾಗುವ ರೀತಿ ನಡೆದುಕೊಂಡರೆ ಅಗಾ ಸುಪ್ರೀಂ ಕೋರ್ಟ್ ನಲ್ಲಿ ಪ್ರಶ್ನಿಸಿ ಎಂದು ಕೋರ್ಟ್ ಹೇಳಿದೆ.     
ರಾಮಸೇತು  ವಿಷಯದ ಬಗ್ಗೆ 2014 ರ ಸಂಸತ್ ಅಧಿವೇಶನದಲ್ಲಿ ಕೇಂದ್ರ ಸರ್ಕಾರದ ನಿಲುವನ್ನು ಸ್ಪಷ್ಟಪಡಿಸಿದ್ದ ಸಚಿವ ನಿತಿನ್ ಗಡ್ಕರಿ, ರಾಮಸೇತುವನ್ನು ಒಡೆಯುವುದಿಲ್ಲ ಎಂದು ಹೇಳಿದ್ದರು. ರಾಮಸೇತು ಸಮುದ್ರ ಒಡೆದು ನೂತನ ಜಲಯೋಜನೆ ನಿರ್ಮಿಸುವ ವಿಚಾರವಾಗಿ ಹಿಂದಿನ ಯುಪಿಎ ಸರ್ಕಾರದ ಅವಧಿಯಲ್ಲಿ ಪ್ರಸ್ತಾಪ ಮುಂದಿಡಲಾಗಿತ್ತು. ಇದರ ವಿರುದ್ಧ ಸುಬ್ರಹ್ಮಣಿಯನ್ ಸ್ವಾಮಿ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ್ದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com