ನೇಪಾಳದಲ್ಲಿ ಪ್ರಬಲ ಭೂಕಂಪ: 5.2ರಷ್ಟು ತೀವ್ರತೆ ದಾಖಲು

ನೇಪಾಳದಲ್ಲಿ ಮತ್ತೆ ಪ್ರಬಲ ಭೂಕಂಪ ಸಂಭವಿಸಿದ್ದು, ರಿಕ್ಟರ್ ಮಾಪಕದಲ್ಲಿ 5.2 ರಷ್ಟು ತೀವ್ರತೆ ದಾಖಲಾಗಿದೆ...
ನೇಪಾಳದಲ್ಲಿ ಪ್ರಬಲ ಭೂಕಂಪ: 5.2ರಷ್ಟು ತೀವ್ರತೆ ದಾಖಲು
ನೇಪಾಳದಲ್ಲಿ ಪ್ರಬಲ ಭೂಕಂಪ: 5.2ರಷ್ಟು ತೀವ್ರತೆ ದಾಖಲು
Updated on: 

ಕಠ್ಮಂಡು: ನೇಪಾಳದಲ್ಲಿ ಮತ್ತೆ ಪ್ರಬಲ ಭೂಕಂಪ ಸಂಭವಿಸಿದ್ದು, ರಿಕ್ಟರ್ ಮಾಪಕದಲ್ಲಿ 5.2 ರಷ್ಟು ತೀವ್ರತೆ ದಾಖಲಾಗಿದೆ.

ನೇಪಾಳದ ಭೂಕಂಪದ ಪರಿಣಾಮ ಇದೀಗ ಬಿಹಾರದಲ್ಲೂ ಭೂಕಂಪನದ ಅನುಭವವಾಗಿದ್ದು, ಬಿಹಾರದ ಕೆಲವೆಡೆ ಶುಕ್ರವಾರ ರಾತ್ರಿ 10 ಗಂಟೆ ಸುಮಾರಿಗೆ ಭೂಮಿ ನಡುಗಿದ ಅನುಭವವಾಗಿದೆ.

ಭೂಕಂಪನದ ಪರಿಣಾಮದ ಜನರು ಭಯಭೀತರಾಗಿ ಮನೆಯಿಂದ ಓಡಿಬಂದಿದ್ದಾರೆ. ಈ ವೇಳೆ ಹಲವರು ಗಂಭೀರವಾಗಿಗೊಂಡಿದ್ದಾರೆ ಎಂದು ಗೃಹ ಸಚಿವಾಲಯದ ವಕ್ತಾರ ಹೇಳಿದ್ದಾರೆ.

ಭೂ ವೈಜ್ಞಾನಿಕ ಸಮೀಕ್ಷೆ ಮಾಡಿದ ಸರ್ವೆಯಲ್ಲಿ ಭೂಕಂಪನದ ಕೇಂದ್ರ ಬಿಂದು ನೇಪಾಳದ ಕಠ್ಮಂಡುವಿನ 1 ಕಿ.ಮೀ. ದೂರದಲ್ಲಿ ಪತ್ತೆಯಾಗಿದ್ದು, ನೇಪಾಳದಲ್ಲಿ ಸಂಭವಿಸಿದ ಭೂಕಂಪದ ತೀವ್ರತೆ ರಿಕ್ಟರ್ ಮಾಪಕದಲ್ಲಿ 5.2ರಷ್ಟು ತೀವ್ರತೆ ದಾಖಲಾಗಿದೆ.

ಕಳೆದ ವರ್ಷದ ಏಪ್ರಿಲ್ ನಲ್ಲಿ ನೇಪಾಳದಲ್ಲಿ ಭೀಕರವಾಗಿ ಭೂಕಂಪನ ಸಂಭವಿಸಿದ್ದು, ಪರಿಣಾಮ 9,000ಸಾವಿರಕ್ಕೂ ಹೆಚ್ಚು ಮಂದಿ ಸಾವನ್ನಪ್ಪಿದ್ದರು. ಲೆಕ್ಕವಿಲ್ಲದಷ್ಟು ಜನರು ಗಾಯಗೊಂಡಿದ್ದರು. ಇದೀಗ ಮತ್ತೆ ನೇಪಾಳದಲ್ಲಿ ಭೂಕಂಪ ಸಂಭವಿಸಿರುವುದು ಅಲ್ಲಿನ ಜನತೆ ಭಯದಲ್ಲಿ ಜೀವನ ನಡೆಸುವಂತೆ ಮಾಡಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com