ವಾಟ್ಸಪ್ ಮೂಲಕ ಸಿಬ್ಬಂದಿಗಳ ಹಾಜರಾತಿ ಪರಿಶೀಲನೆ

ಸರ್ಕಾರಿ ಕಚೇರಿಗಳಲ್ಲಿ ಸಮಯಕ್ಕೆ ಸರಿಯಾಗಿ ಕೆಲಸಕ್ಕೆ ಹೋಗುವವರು ಅಪರೂಪ. ಇನ್ನು ಕೆಲಸ...
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ
Updated on

ಚೆನ್ನೈ: ಸರ್ಕಾರಿ ಕಚೇರಿಗಳಲ್ಲಿ ಸಮಯಕ್ಕೆ ಸರಿಯಾಗಿ ಕೆಲಸಕ್ಕೆ ಹೋಗುವವರು ಅಪರೂಪ. ಇನ್ನು ಕೆಲಸ ಮಾಡುವವರು ಇನ್ನೂ ಅಪರೂಪ. ಸರ್ಕಾರಿ ಆಸ್ಪತ್ರೆಗಳ ಸ್ಥಿತಿಯೂ ಇದಕ್ಕಿಂತ ಭಿನ್ನವಾಗಿರುವುದಿಲ್ಲ.ಆಗ ರೋಗಿಗಳು ಬಹಳ ಕಷ್ಟ ಅನುಭವಿಸಬೇಕಾಗುತ್ತದೆ.

ನೌಕರರು ಸಮಯಕ್ಕೆ ಸರಿಯಾಗಿ ಕೆಲಸಕ್ಕೆ ಬರಲು ಚೆನ್ನೈ ಮಹಾ ನಗರಪಾಲಿಕೆಯ ನಗರ ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ಒಂದು ಉಪಾಯವನ್ನು ಮಾಡಲಾಗಿದೆ. ಅದೇನೆಂದರೆ ವಾಟ್ಸಪ್  ಮೂಲಕ ಸಂದೇಶ ಕಳುಹಿಸುವುದು. ನಗರದಾದ್ಯಂತ 15 ವಲಯಗಳ ಆರೋಗ್ಯಾಧಿಕಾರಿಗಳು ಮತ್ತು ವೈದ್ಯಕೀಯ ಅಧಿಕಾರಿಗಳು ಪ್ರತಿದಿನ ಕನಿಷ್ಠ 2 ಆರೋಗ್ಯ ಕೇಂದ್ರಗಳಿಗೆ ಬೆಳಿಗ್ಗೆ 8 ಗಂಟೆಯಿಂದ 8.30ರವರೆಗೆ ಭೇಟಿ ನೀಡಿ ಅಲ್ಲಿರುವ ಸಿಬ್ಬಂದಿಗಳ ಹಾಜರಾತಿ ತೆಗೆದುಕೊಂಡು ವಾಟ್ಸಪ್  ಗುಂಪಿನಲ್ಲಿ ಕಳುಹಿಸುತ್ತಾರೆ.

ವೈದ್ಯರು, ನರ್ಸುಗಳು, ಮೆಡಿಕಲ್ ಸಿಬ್ಬಂದಿಗಳು ಮತ್ತು ಲ್ಯಾಬ್ ತಂತ್ರಜ್ಞರು ಆಸ್ಪತ್ರೆಗೆ ತಡವಾಗಿ ಬಂದು, ಬೇಗನೆ ತೆರಳುತ್ತಾರೆ. ಇದರಿಂದ ಭಾರೀ ತೊಂದರೆಯಾಗುತ್ತಿದೆ ಎಂದು ರೋಗಿಗಳು ದೂರು ನೀಡಿದ್ದಕ್ಕೆ ಚೆನ್ನೈ ನಗರಪಾಲಿಕೆ ಈ ಕ್ರಮ ಕೈಗೊಂಡಿದೆ. ಚೆನ್ನೈಯಲ್ಲಿ 140 ಪ್ರಾಥಮಿಕ ಆರೋಗ್ಯ ಕೇಂದ್ರಗಳಿದ್ದು ಬೆಳಿಗ್ಗೆ 8 ಗಂಟೆಯಿಂದ ಸಂಜೆ 3ರವರೆಗೆ ವ್ಯವಹಾರದಲ್ಲಿರುತ್ತದೆ. ಪ್ರತಿ ಕೇಂದ್ರದಲ್ಲಿ ಸುಮಾರು 150 ರೋಗಿಗಳಿಗೆ ಚಿಕಿತ್ಸೆ ನೀಡಲಾಗುತ್ತದೆ.

'' ನಾವು ವಾಟ್ಸಪ್  ಗುಂಪನ್ನು ರಚಿಸಿದ್ದು, ಸಂಬಂಧಪಟ್ಟ ಅಧಿಕಾರಿಗಳನ್ನು ನಗರದಲ್ಲಿರುವ ಪ್ರಾಥಮಿಕ ಆರೋಗ್ಯ ಕೇಂದ್ರಗಳಿಗೆ ಭೇಟಿ ನೀಡಲು ಸೂಚಿಸಿದ್ದೇವೆ. ಎಲ್ಲಾ ಸಿಬ್ಬಂದಿಗಳು ಹಾಜರಿದ್ದಾರೆಯೇ ಇಲ್ಲವೇ ಎಂದು ಅಧಿಕಾರಿಗಳು ಪರಿಶೀಲಿಸುತ್ತಾರೆ'' ಎನ್ನುತ್ತಾರೆ ಅಧಿಕಾರಿಯೊಬ್ಬರು.

ವಾಟ್ಸಪ್ ಮೂಲಕ ಪಾಲಿಕೆ ಆರೋಗ್ಯ ಇಲಾಖೆಯ ಸಿಬ್ಬಂದಿಗಳ ಕಾರ್ಯವೈಖರಿಯಲ್ಲಿ ಬದಲಾಗುತ್ತದೆಯೇ, ಕೆಲಸದಲ್ಲಿ ಹೆಚ್ಚು ಪ್ರಾಮಾಣಿಕರಾಗುತ್ತಾರೆಯೇ ಎಂದು ನೋಡಬೇಕಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com