ಮೋದಿ ಮತ್ತು ಓವೈಸಿ ಕಾಂಗ್ರೆಸ್ ವಿರೋಧಿಗಳು, ಒಡೆದು ಆಳುವ ನೀತಿಯಲ್ಲೇ ಅವರಿಗೆ ನಂಬಿಕೆ: ದಿಗ್ವಿಜಯ್ ಸಿಂಗ್

ಎಐಎಂಐಎಂ ಶಾಸಕ ಅಕ್ಬರುದ್ದೀನ್ ಓವೈಸಿ ಹಾಗೂ ಪ್ರಧಾನಿ ನರೇಂದ್ರ ಮೋದಿ ಕಾಂಗ್ರೆಸ್ ವಿರೋಧಿಗಳು ಎಂದು ಕಾಂಗ್ರೆಸ್ ಹಿರಿಯ ನಾಯಕ ದಿಗ್ವಿಜಯ್ ಸಿಂಗ್
ದಿಗ್ವಿಜಯ್ ಸಿಂಗ್
ದಿಗ್ವಿಜಯ್ ಸಿಂಗ್

ನವದೆಹಲಿ: ಎಐಎಂಐಎಂ ಶಾಸಕ ಅಕ್ಬರುದ್ದೀನ್ ಓವೈಸಿ ಹಾಗೂ ಪ್ರಧಾನಿ ನರೇಂದ್ರ ಮೋದಿ ಕಾಂಗ್ರೆಸ್ ವಿರೋಧಿಗಳು ಎಂದು ಕಾಂಗ್ರೆಸ್ ಹಿರಿಯ ನಾಯಕ ದಿಗ್ವಿಜಯ್ ಸಿಂಗ್ ಆರೋಪಿಸಿದ್ದಾರೆ.

ಈ ಸಂಬಂಧ ಟ್ವಿಟ್ಟರ್ ನಲ್ಲಿ ಟ್ವೀಟ್ ಮಾಡಿರುವ ಅವರು, ಬ್ರಿಟಿಷರು ಕೂಡ ಕಾಂಗ್ರೆಸ್ ಅನ್ನು ವಿರೋಧಿಸುತ್ತಿದ್ದರು. ಹಾಗೆಯೇ ಮೋದಿ ಮತ್ತು ಓವೈಸಿ ಇಬ್ಬರು ಕಾಂಗ್ರೆಸ್ ಅನ್ನು ವಿರೋಧಿಸುತ್ತಿದ್ದಾರೆ ಎಂದು ಹೇಳಿದ್ದಾರೆ.

ಬ್ರಿಟಿಷರು ಒಡೆದು ಆಳುವ ನೀತಿಯಲ್ಲಿ ಹೆಚ್ಚು ನಂಬಿಕೆ ಇಟ್ಟಿದ್ದರು. ಹಾಗೆಯೇ ಮೋದಿ ಮತ್ತು ಓವೈಸಿ ಇಬ್ಬರು ಒಡೆದು ಆಳುವ ನೀತಿಯಲ್ಲಿ ನಂಬಿಕೆ ಎಂದು ಕಿಡಿ ಕಾರಿದ್ದಾರೆ.

ಕಾಂಗ್ರೆಸ್ ಗೆ ದೇಶದ ಹಿತಾಸಕ್ತಿಯೇ ಮೊದಲ ಆದ್ಯತೆ,  ಬೇರೆಯವರ ವಯಕ್ತಿಕ ವಿಷಯಗಳಲ್ಲಿ ಕಾಂಗ್ರೆಸ್ ಗೆ ಆಸಕ್ತಿಯಿಲ್ಲ. ಈ ಇಬ್ಬರು ಸಮಾಜವನ್ನು ಒಡೆಯಲು ಮುಂದಾದರೇ, ಕಾಂಗ್ರೆಸ್ ದೇಶವನ್ನು ಒಗ್ಗೂಡಿಸುತ್ತದೆ ಎಂದು ಅವರು ಹೇಳಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com