ನವದೆಹಲಿ: ಕೇಂದ್ರ ಗೃಹ ಖಾತೆ ರಾಜ್ಯ ಸಚಿವ ಕಿರಣ್ ರಿಜಿಜು ಅವರು ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್ ದೆಹಲಿ ಸಮೀಪದ ಹಿಂದೊನ್ ವಾಯುನೆಲೆಯಲ್ಲಿ ತುರ್ತು ಭೂಸ್ಪರ್ಶ ಮಾಡಿದ ಘಟನೆ ಮಂಗಳವಾರ ನಡೆದಿದೆ.
ಇಂದು ಮಧ್ಯಾಹ್ನ ದೆಹಲಿಯ ಸಫ್ದರ್ ಜಂಗ್ ವಿಮಾನ ನಿಲ್ದಾಣದಲ್ಲಿ ಹೆಲಿಕಾಪ್ಟರ್ ಟೇಕ್ ಆಫ್ ಆದ ಕೆಲವೇ ಕ್ಷಣಗಳಲ್ಲಿ ಕಾಪ್ಟರ್ ನ ಗೇರ್ ಬಾಕ್ಸ್ ನಲ್ಲಿ ಸಮಸ್ಯೆ ಕಾಣಿಸಿಕೊಂಡಿದೆ. ಹೀಗಾಗಿ ಪೈಲಟ್ ತುರ್ತು ಭೂಸ್ಪರ್ಶ ಮಾಡಿದ್ದಾರೆ ಎಂದು ಮೂಲಗಳು ತಿಳಿಸಿವೆ.
ಮಧ್ಯಾಹ್ನ ಸುಮಾರು 12.10ರ ಸುಮಾರಿಗೆ ಈ ಘಟನೆ ನಡೆದಿದ್ದು, ಸಚಿವ ಕಿರಣ್ ರಿಜಿಜು ಅವರು ಗಡಿ ಭದ್ರತಾ ಪಡೆಯ ಹೆಲಿಕಾಪ್ಟರ್ ಎಂಐ-17 ನ5 ನಲ್ಲಿ ಉತ್ತರಾಖಂಡ್ ನ ತೆಹ್ರಿ ಡ್ಯಾಮ್ ಗೆ ತೆರಳುತ್ತಿದ್ದರು ಎನ್ನಲಾಗಿದೆ.