ಸಿಯಾಚಿನ್ ಹೀರೋ ಹನುಮಂತಪ್ಪ ಅಂತಿಮ ದರ್ಶನ ಪಡೆದ ಸಿದ್ದರಾಮಯ್ಯ
ಹುಬ್ಬಳ್ಳಿ: ಹುತಾತ್ಮ ಸಿಯಾಚಿನ್ ಹೀರೋ ಲ್ಯಾನ್ಸ್ ನಾಯಕ್ ಹನುಮಂತಪ್ಪ ಕೊಪ್ಪದ್ ಪಾರ್ಥಿವ ಶರೀರದ ಅಂತಿಮ ದರ್ಶನವನ್ನು ಸಿಎಂ ಸಿದ್ದರಾಮಯ್ಯ ಸೇರಿದಂತೆ ರಾಜ್ಯ ಸಚಿವರು ಹಾಗೂ ಕೇಂದ್ರ ಸಚಿವರು ಪಡೆದಿದ್ದಾರೆ.
ಕೊಪ್ಪದ್ ಅವರ ಪಾರ್ಥಿವ ಶರೀರಕ್ಕೆ ಸಿದ್ದರಾಮಯ್ಯ ನವರು ಪುಷ್ಪನಮನ ಸಲ್ಲಿಸಿದರು. ಬಿಜೆಪಿ ರಾಜ್ಯಾಧ್ಯಕ್ಷ ಪ್ರಹ್ಲಾದ್ ಜೋಶಿ, ಕೇಂದ್ರ ಸಚಿವ ಅನಂತ ಕುಮಾರ್ ಅವರು ಅಂತಿಮ ದರ್ಶನ ಪಡೆದರು.
ಸಾರ್ವಜನಿಕರಿಗಾಗಿ ಹುಬ್ಬಳ್ಳಿಯ ನೆಹರು ಸ್ಟೇಡಿಯಂನಲ್ಲಿ ಬೆಳಗ್ಗೆ 10 ಗಂಟೆಯವರೆಗೂ ಅಂತಿಮ ದರ್ಶನಕ್ಕಾಗಿ ವ್ಯವಸ್ಥೆ ಮಾಡಲಾಗಿದೆ. ನೆಹರು ಸ್ಟೇಡಿಯಂ ಸುತ್ತ ಸಾವಿರಾರು ಜನರು ನೆರೆದಿದ್ದು, ಹನುಮಂತಪ್ಪ ಕೊಪ್ಪದ್ ಅವರ ಅಂತಿಮ ದರ್ಶನ ಪಡೆದರು. ಭದ್ರತೆಗಾಗಿ 1 ಸಾವಿರ ಪೊಲೀಸರನ್ನು ನಿಯೋಜಿಸಲಾಗಿದೆ.
ಇನ್ನು ಹನುಮಂತಪ್ಪನವರ ಹುಟ್ಟುರಾದ ಬೆಟದೂರಿನಲ್ಲಿ ಅಂತ್ಯಕ್ರಿಯೆ ನಡೆಯಲಿದ್ದು, ಅಂತ್ಯಕ್ರಿಯೆಗೂ ಮುನ್ನ ಗ್ರಾಮಸ್ಥರಿಗಾಗಿ ಬೆಟದೂರಿನ ಸರ್ಕಾರಿ ಶಾಲೆಯ ಆವರಣದಲ್ಲಿ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ. ನಂತರ 2 ಗಂಟೆಗೆ ಸರ್ಕಾರಿ ಸಕಲ ಗೌರವಗಳೊಂದಿಗೆ ಅಂತ್ಯಕ್ರಿಯೆ ನಡೆಯಲಿದೆ.
Follow KannadaPrabha channel on WhatsApp
KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ