ಆದರೆ ಈ ಕಾರ್ಯಕ್ರಮವನ್ನು ನಡೆಸಲು ವಿಶ್ವವಿದ್ಯಾಲಯದ ಆಡಳಿತ ಮಂಡಳಿ ಅನುಮತಿ ನೀಡಿರಲಿಲ್ಲ. ಆದರೆ ಇದನ್ನು ಲೆಕ್ಕಿಸದೇ ಕೆಲ ವಿದ್ಯಾರ್ಥಿಗಳು, ಅಫ್ಜಲ್ ಗುರು ಜ್ಯುಡಿಶಿಯಲ್ ಹತ್ಯೆಯನ್ನು ಖಂಡಿಸಿ ನಡೆಸುತ್ತಿರುವ ಪ್ರತಿಭಟನಾ ಮೆರವಣಿಗೆ ಬನ್ನಿ ಎಂದು ಆಹ್ವಾನಿಸಿ ಕ್ಯಾಂಪಸ್ ಸುತ್ತಮುತ್ತ ಪೋಸ್ಟರ್ ಗಳನ್ನು ಹಚ್ಚಿದ್ದರು. ಇದಕ್ಕೆ ಎಬಿವಿಪಿ ತೀವ್ರ ಆಕ್ಷೇಪ ವ್ಯಕ್ತಪಡಿಸಿತ್ತು. ಈ ಸಂಬಂಧ ಉಪಕುಲಪತಿಗೆ ದೂರು ನೀಡಿತ್ತು. ಈ ಸಂಬಂಧ ಎರಡು ಗುಂಪುಗಳ ನಡುವೆ ಸಂಘರ್ಷಣೆ ನಡೆದಿತ್ತು.