ದೆಹಲಿ ಪೊಲೀಸರು ಖಾಕಿ ಧರಿಸಿದ ಕೇಸರಿ ಪಡೆ: ಮನಿಶ್ ಸಿಸೋಡಿಯಾ

ಆಮ್ ಆದ್ಮಿ ಪಕ್ಷ ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿಯನ್ನು ಮುಂದುವರೆಸಿದ್ದು, ದೆಹಲಿ ಪೊಲೀಸರು ಖಾಕಿ ಬಟ್ಟೆ ಧರಿಸಿದ ಕೇಸರಿ ಪಡೆ ಎಂದು ದೆಹಲಿ....
ಮನಿಶ್ ಸಿಸೋಡಿಯಾ
ಮನಿಶ್ ಸಿಸೋಡಿಯಾ
ನವದೆಹಲಿ: ಆಮ್ ಆದ್ಮಿ ಪಕ್ಷ ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿಯನ್ನು ಮುಂದುವರೆಸಿದ್ದು, ದೆಹಲಿ ಪೊಲೀಸರು ಖಾಕಿ ಬಟ್ಟೆ ಧರಿಸಿದ ಕೇಸರಿ ಪಡೆ ಎಂದು ದೆಹಲಿ ಉಪ ಮುಖ್ಯಮಂತ್ರಿ ಮನಿಶ್ ಸಿಸೋಡಿಯಾ ಅವರು ಶುಕ್ರವಾರ ಆರೋಪಿಸಿದ್ದಾರೆ.
ದೆಹಲಿ ಪೊಲೀಸರು ಕೇಂದ್ರ ಸರ್ಕಾರದ ಸೂಚನೆಯಂತೆ ಕೆಲಸ ಮಾಡುತ್ತಿದ್ದಾರೆ. ಖಾಕಿ ಈಗ ಸಂಪೂರ್ಣ ಕೇಸರಿಮಯವಾಗುತ್ತಿದೆ. ಈ ರೀತಿ ಯಾವ ರಾಜ್ಯದಲ್ಲೂ ಆಗಿಲ್ಲ. 
ದೆಹಲಿ ಪೊಲೀಸರು ತಮ್ಮ ಜೀವನವನ್ನೇ ತ್ಯಾಗ ಮಾಡುವ ಮೂಲಕ ಖಾಕಿಯ ಗೌರವ ಹೆಚ್ಚಿಸಿದ್ದಾರೆ. ಆದರೆ ಕೇಂದ್ರ ಸರ್ಕಾರ ಅದನ್ನು ಕೇಸರಿಮಯವಾಗಿಸುತ್ತಿದೆ ಎಂದು ದೆಹಲಿ ಡಿಸಿಎಂ ಹೇಳಿದ್ದಾರೆ.
ದೆಹಲಿ ಪೊಲೀಸರು ಕಾನೂನು ಸುವ್ಯವಸ್ಥೆಗೆ ಸಂಬಂಧಿಸಿದಂತೆ ಯಾವುದೇ ಕೆಲಸ ಮಾಡದೇ ಕೇವಲ ದೆಹಲಿ ಸರ್ಕಾರದ ಆಮ್ ಆದ್ಮಿ ಸಚಿವರನ್ನು ಟಾರ್ಗೆಟ್ ಮಾಡುತ್ತಿದೆ ಎಂದು ದೂರಿದರು,
ಖಾಸಗಿ ಶಾಲೆಯಲ್ಲಿ ಆರು ವರ್ಷದ ಬಾಲಕ ನಿಗೂಢವಾಗಿ ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಧಿಸಿದಂತೆ ದೆಹಲಿ ಪೊಲೀಸರು ಇದುವರೆಗೂ ಯಾರನ್ನೂ ಬಂಧಿಸಿಲ್ಲ. ಅಲ್ಲದೆ ಸರ್ಕಾರಿ ಶಾಲೆಯ ಶಿಕ್ಷಕರೊಬ್ಬರು ಗಂಭೀರ ಹಲ್ಲೆಯಾಗಿದೆ. ಇನ್ನೂ ಅತ್ಯಾಚಾರ ಹಾಗೂ ಕೊಲೆ ಸೇರಿದಂತೆ ಹಲವು ಅಪರಾಧ ಪ್ರಕರಣಗಳಿಗೆ ಸಂಬಂಧಿಸಿದಂತೆ ಪೊಲೀಸರು ಯಾರನ್ನು ಬಂಧಿಸಿಲ್ಲ ಎಂದು ಸಿಸೋಡಿಯಾ ಆರೋಪಿಸಿದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com