ಆರೆಸ್ಸೆಸ್‌ನ ಹಿರಿಯ ನಾಯಕರಾದ ರಾಮ್‌ಲಾಲ್ ಮತ್ತು ಓಮ್ ಮಾಥೂರ್, ಬಿಜೆಪಿ ನಾಯಕರಾದ ರವಿಶಂಕರ್ ಪ್ರಸಾದ್, ಮನೋಜ್ ತಿವಾರಿ, ವಿಜಯ್ ಗೋಯಲ್, ಸುಧಾಂಶು ತ್ರಿವೇದಿ ಮೊದಲಾದವರು ಈ ಪಾರ್ಟಿಯಲ್ಲಿ ಭಾಗಿಯಾಗಿದ್ದರು. ಬಿಜೆಪಿಯ ಇಷ್ಟೊಂದು ನಾಯಕರು ಬರ್ತ್‌ಡೇ ಪಾರ್ಟಿಯಲ್ಲಿ ಭಾಗವಹಿಸಿರುವುದರಿಂದ ಕುಮಾರ್ ವಿಶ್ವಾಸ್ ಬಿಜೆಪಿಗೆ ಸೇರಲಿದ್ದಾರೆ ಎಂಬ ಊಹಾಪೋಹಕ್ಕೆ ಸಾಕ್ಷ್ಯ ಸಿಕ್ಕಿದಂತಾಗಿದೆ.