ಅರವಿಂದ್ ಕೇಜ್ರಿವಾಲ್
ದೇಶ
ಜೆಎನ್ ಯು ದೇಶ ವಿರೋಧಿ ಪ್ರತಿಭಟನೆ: ತನಿಖೆಗೆ ಕೇಜ್ರಿವಾಲ್ ಆದೇಶ
ಜವಾಹರ್‍ಲಾಲ್ ನೆಹರೂ ವಿಶ್ವವಿದ್ಯಾಲಯ(ಜೆಎನ್‍ಯು)ದಲ್ಲಿ ನಡೆದಿದೆ ಎನ್ನಲಾಗುತ್ತಿರುವ ದೇಶ ವಿರೋಧಿ ಪ್ರತಿಭಟನೆಯ ಕುರಿತು ತನಿಖೆ ನಡೆಸುವಂತೆ ದೆಹಲಿ...
ನವದೆಹಲಿ: ಜವಾಹರ್‍ಲಾಲ್ ನೆಹರೂ ವಿಶ್ವವಿದ್ಯಾಲಯ(ಜೆಎನ್‍ಯು)ದಲ್ಲಿ ನಡೆದಿದೆ ಎನ್ನಲಾಗುತ್ತಿರುವ ದೇಶ ವಿರೋಧಿ ಪ್ರತಿಭಟನೆಯ ಕುರಿತು ತನಿಖೆ ನಡೆಸುವಂತೆ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರು ಶನಿವಾರ ಜಿಲ್ಲಾ ಮ್ಯಾಜಿಸ್ಟ್ರೇಟ್ ಗೆ ಸೂಚಿಸಿದ್ದಾರೆ.
ಯಾವುದೇ ಕಾರಣಕ್ಕೂ ದೇಶ ವಿರೋಧಿ ಕೃತ್ಯಗಳನ್ನು ಸಹಿಸಿಕೊಳ್ಳುವುದಿಲ್ಲ ಎಂದಿರುವ ದೆಹಲಿ ಸಿಎಂ, ದೇಶ ವಿರೋಧಿ ಕೃತ್ಯ ಎಸಗಿದವರನ್ನು ಗುರುತಿಸಿ, ಶಿಕ್ಷಿಸಲಾಗುವುದು ಎಂದು ಟ್ವೀಟ್ ಮಾಡಿದ್ದಾರೆ.
ಜೆಎನ್ ಯು ವಿದ್ಯಾರ್ಥಿ ಸಂಘದ ನಾಯಕರು ದೇಶ ವಿರೋಧಿ ಘೋಷಣೆಗಳನ್ನು ಕೂಗಿದ್ದಾರೆ ಎಂದು ಆರೋಪಿಸಲಾಗುತ್ತಿದೆ. ಆದರೆ ಇದಕ್ಕೆ ಪ್ರತಿಯಾಗಿ ಎಬಿವಿಪಿ ವಿದ್ಯಾರ್ಥಿಗಳು ಆ ಕೆಲಸ ಮಾಡಿದ್ದಾರೆ ಎಂದು ದೂರಲಾಗುತ್ತಿದೆ. ಹೀಗಾಗಿ ಘಟನೆಯ ಕುರಿತು ತನಿಖೆಗೆ ಆದೇಶಿಸಲಾಗಿದೆ ಎಂದು ದೆಹಲಿ ಸಿಎಂ ತಿಳಿಸಿದ್ದಾರೆ.
ಫೆಬ್ರವರಿ 9ರಂದು ವಿವಿಯಲ್ಲಿ ಕಾರ್ಯಕ್ರಮವೊಂದನ್ನು ಆಯೋಜಿಸಲಾಗಿತ್ತು. ಈ ವೇಳೆ ಕೆಲವು ವಿದ್ಯಾರ್ಥಿಗಳು ಅಫ್ಜಲ್ ಗುರು ಪರ ಘೋಷಣೆಗಳನ್ನು ಕೂಗಿದ ಘಟನೆ ನಡೆದಿತ್ತು. ಈ ಸಂಬಂಧ ಈಗಾಗಲೇ ಜೆಎನ್ ಯು ವಿದ್ಯಾರ್ಥಿ ಸಂಘದ ಅಧ್ಯಕ್ಷ ಕನ್ಹಯ್ಯ ಕುಮಾರ್ ಸೇರಿಜದಂತೆ ಏಳು ವಿದ್ಯಾರ್ಥಿಗಳನ್ನು ದೆಹಲಿ ಪೊಲೀಸರು ಬಂಧಿಸಿದ್ದಾರೆ.
Follow KannadaPrabha channel on WhatsApp
KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ