ಮೇಕ್ ಇನ್ ಇಂಡಿಯಾ ಸಪ್ತಾಹಕ್ಕೆ ಚಾಲನೆ ನೀಡಲಿರುವ ಪ್ರಧಾನಿ ಮೋದಿ

ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಶನಿವಾರ ಮುಂಬೈಗೆ ಭೇಟಿ ನೀಡಲಿದ್ದು ಮೇಕ್ ಇನ್ ಇಂಡಿಯಾ ಸಪ್ತಾಹ ಕಾರ್ಯಕ್ರಮವನ್ನು ಉದ್ಘಾಟನೆ ಮಾಡಲಿದ್ದಾರೆ...
ಪ್ರಧಾನಮಂತ್ರಿ ನರೇಂದ್ರ ಮೋದಿ
ಪ್ರಧಾನಮಂತ್ರಿ ನರೇಂದ್ರ ಮೋದಿ
Updated on: 
ನವದೆಹಲಿ: ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಶನಿವಾರ ಮುಂಬೈಗೆ ಭೇಟಿ ನೀಡಲಿದ್ದು ಮೇಕ್ ಇನ್ ಇಂಡಿಯಾ ಸಪ್ತಾಹ ಕಾರ್ಯಕ್ರಮವನ್ನು ಉದ್ಘಾಟನೆ ಮಾಡಲಿದ್ದಾರೆ. 
ಮೋದಿ ಸರ್ಕಾರ ಕನಸಿನ ಮಗು ಎಂದೇ ಹೇಳಲಾಗುತ್ತಿರುವ ಮೇಕ್ ಇನ್ ಇಂಡಿಯಾ ಸಪ್ತಾಹವನ್ನು ಬಾಂದ್ರಾ ಕುರ್ಲಾ ಸಂಕೀರ್ಣದಲ್ಲಿ ಎಂಎಂಆರ್ ಡಿಎ ಕ್ರೀಡಾಂಗಣದಲ್ಲಿ ನಡೆಯಲಿದ್ದು, ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಉದ್ಘಾಟನೆ ನೀಡಲಿದ್ದಾರೆ. ಉದ್ಘಾಟನಾ ಕಾರ್ಯಕ್ರಮದಲ್ಲಿ ಮೂರು ವಿದೇಶಿ ಸರ್ಕಾರಗಳ ಮುಖ್ಯಸ್ಥರು ಸಹಿತ ಹಲವಾರು ಪ್ರತಿಷ್ಠಿತರು ಹಾಗೂ ವಿಐಪಿಗಳು ಭಾಗವಹಿಸಲಿದ್ದಾರೆ. ಮೇಕ್ ಇನ್ ಇಂಡಿಯಾ ಸಪ್ತಾಹದ ಉದ್ಘಾಟನೆ ನಂತರ ವರ್ಲಿಯಲ್ಲಿ ನಡೆಯುವ ನ್ಯಾಷನಲ್ ಸ್ಪೋರ್ಟ್ಸ್ ಕ್ಲಬ್ ಕಾರ್ಯದಲ್ಲಿಯೂ ಮೋದಿಯವರು ಪಾಲ್ಗೊಳಲ್ಲಿದ್ದಾರೆ. 
ನಂತರ ಮಹಾಲಕ್ಷ್ಮಿ ರೇಸ್ ಕೋರ್ಸ್ ನ ಟರ್ಫ್ ಕ್ಲಬ್ ನಲ್ಲಿ ನಡೆಯುವ ಔತಣಕೂಟವೂ ಕೂಡ ಮೋದಿಯವರ ನೇತೃತ್ವದಲ್ಲಿಯೇ ನಡೆಯಲಿದೆ. ಇದಕ್ಕೆ ದೇಶ, ವಿದೇಶಗಳಿಂದ ಸುಮಾರು 800 ಮಂದಿಯನ್ನು ಆಹ್ವಾನಿಸಲಾಗಿದೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com