ನರೇಂದ್ರ ಮೋದಿ
ದೇಶ
ಮೋದಿ, ಬಿಜೆಪಿಯಿಂದ ಜನರು ಬೇಸತ್ತು ಹೋಗಿದ್ದಾರೆ: ಕಾಂಗ್ರೆಸ್ ನಾಯಕ
ಭಾರತೀಯ ಜನತಾ ಪಕ್ಷ(ಬಿಜೆಪಿ) ಮತ್ತು ಪ್ರಧಾನಿ ನರೇಂದ್ರ ಮೋದಿ ಅವರ ನಾಟಕವನ್ನು ನೋಡಿ ನೋಡಿ ಜನರಿಗೆ ಸಾಕಾಗಿ...
ಪುದುಚೆರಿ: ಭಾರತೀಯ ಜನತಾ ಪಕ್ಷ(ಬಿಜೆಪಿ) ಮತ್ತು ಪ್ರಧಾನಿ ನರೇಂದ್ರ ಮೋದಿ ಅವರ ನಾಟಕವನ್ನು ನೋಡಿ ನೋಡಿ ಜನರಿಗೆ ಸಾಕಾಗಿ ಹೋಗಿದೆ ಎಂದು ಕಾಂಗ್ರೆಸ್ ಹಿರಿಯ ನಾಯಕ ಗುಲಾಮ್ ನಬಿ ಆಜಾದ್ ಹೇಳಿದ್ದಾರೆ.
ನಾನು ಭೇಟಿ ನೀಡಿರುವ ಸ್ಥಳಗಳಲೆಲ್ಲಾ, ಜನರು ಬಂದು ಬಿಜೆಪಿ ಸರ್ಕಾರದ ಕಾರ್ಯವೈಖರಿ ಬಗ್ಗೆ ಬೇಸತ್ತಿರುವುದಾಗಿ ತಿಳಿಸುತ್ತಿದ್ದಾರೆ. ಇನ್ನು ಮೂರುವರೆ ವರ್ಷಗಳ ಕಾಲ ಇದೇ ಸರ್ಕಾರವನ್ನು ಸಹಿಸಿಕೊಳ್ಳಲು ಸಾಧ್ಯವಿಲ್ಲ ಎಂದು ಹೇಳುತ್ತಾರೆ, ಈಗಲೇ ಮತ್ತೊಮ್ಮೆ ಚುನಾವಣೆ ಏಕೆ ನಡೆಸಬಾರದು ಎಂದು ಕೇಳುವವರೂ ಇದ್ದಾರೆ ಎಂದು ಆಜಾದ್ ತಿಳಿಸಿದ್ದಾರೆ.
ಮೋದಿ ಸರ್ಕಾರ ಏನೋ ಮಾಡುತ್ತದೆ ಎಂದು ಕಾದು ಕಾದು ಸುಸ್ತಾಗಿರುವ ಜನರಿಗೆ ಮೋದಿ, ಬಿಜೆಪಿಯ ನಾಟಕದಿಂದ ಬೇಸತ್ತು ಹೋಗಿದ್ದಾರೆ ಎಂದು ಅವರು, ಮೋದಿ ಭಾಷಣ ಕೇಳಲು ಜನರು ಇಷ್ಟ ಪಡುತ್ತಾರೇ, ಆದರೆ, ಅದೇ ಸರ್ಕಾರದ ಕಾರ್ಯವೈಖರಿ ಬಗ್ಗೆ ಕೇಳಿದರೆ ಸೊನ್ನೆ ಎಂದು ಹೇಳಲಾಗುತ್ತಿದೆ ಎಂದು ಆರೋಪಿಸಿದ್ದಾರೆ.
ಪುದುಚೆರಿಗೆ ವೀಶೇಷ ಪ್ಯಾಕೇಜ್ ನೀಡಲಾಗುತ್ತದೆ ಎಂದು ಎನ್ ಡಿಎ ಸರ್ಕಾರ ಹೇಳಿತ್ತು. ಆದರೆ, ಈವರೆಗೆ ಯಾವುದೇ ಸೌಲಭ್ಯಗಳನ್ನು ಸರ್ಕಾರ ನೀಡಿಲ್ಲ ಎಂದು ಆಪಾದಸಿದ್ದಾರೆ.
Follow KannadaPrabha channel on WhatsApp
KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ