ದೆಹಲಿ ಆಡಳಿತಾರೂಢ ಆಮ್ ಆದ್ಮಿ ಸರ್ಕಾರಕ್ಕೆ 1 ವರ್ಷದ ತುಂಬಿರುವ ಹಿನ್ನೆಲೆಯಲ್ಲಿ ಸಾರ್ವಜನಿಕ ಕಾರ್ಯಕ್ರಮದಲ್ಲಿ ಮಾತನಾಡಿರುವ ಅವರು, ಅಧಿಕಾರಕ್ಕೆ ಬಂದಾಗ ನಮ್ಮ ಸರ್ಕಾರ ಅಗ್ಗದ ಬೆಲೆ ನೀರು ನೀಡುವುದಾಗಿ ಹೇಳಿತ್ತು. ಸರ್ಕಾರ ಆ ಬಗ್ಗೆ ಕೆಲಸ ಮಾಡುತ್ತಿದ್ದು, ಶೀಘ್ರದಲ್ಲೇ ಜನರಿಗೆ ಇದರ ಫಲ ದೊರಕಲಿದೆ. ಅಲ್ಲದೆ, ಅನಧಿಕೃತ ಕಾಲೋನಿಗಳಿಗೂ ನೀರಿನ ಸಂಪರ್ಕವನ್ನು ನೀಡುವ ಬಗ್ಗೆ ಚಿಂತನೆ ನಡೆಯುತ್ತಿದೆ. ದೆಹಲಿಯ ಹಲವು ಪ್ರದೇಶಗಳಲ್ಲಿ ನೀರು ಸೋರಿಕೆಯಾಗುತ್ತಿದ್ದು, ಈ ಬಗ್ಗೆ ಸರ್ಕಾರದ ಗಮನಕ್ಕೆ ಬಂದಿದೆ. ಕುಡಿಯುವ ನೀರನ್ನು ಮತ್ತಷ್ಟು ಶುದ್ಧ, ಸುರಕ್ಷತೆಯಿಂದ ಜನರಿಗೆ ನೀಡಲು ಸರ್ಕಾರ ಚಿಂತನೆ ನಡೆಸುತ್ತಿದ್ದು, ಈ ಬಗ್ಗೆಯೂ ಸರ್ಕಾರ ಕೆಲಸ ಮಾಡುತ್ತಿದೆ ಎಂದು ಹೇಳಿದ್ದಾರೆ.