ಜೆಎನ್ ಯು ವಿವಾದ: ಉಗ್ರರ ನಂಟು ಬಗ್ಗೆ ಶಂಕೆ ವ್ಯಕ್ತಪಡಿಸಿದ ಅಧಿಕಾರಿಗಳು

ಜೆಎನ್ ಯು ವಿವಾದ ದಿನದಿಂದ ದಿನಕ್ಕೆ ಹೊಸ ತಿರುವು ಪಡೆದುಕೊಳ್ಳುತ್ತಿದ್ದು, ಇದೀಗ ವಿದ್ಯಾರ್ಥಿಗಳ ಪ್ರತಿಭಟನೆ ಹಿಂದ ಉಗ್ರರ ನಂಟಿರುವುದಾಗಿ ಅಧಿಕಾರಿಗಲು ಶಂಕೆ ವ್ಯಕ್ತಪಡಿಸಿದ್ದಾರೆ...
ಜೆಎನ್ ಯು ವಿವಾದ: ಉಗ್ರರ ನಂಟು ಬಗ್ಗೆ ಶಂಕೆ ವ್ಯಕ್ತಪಡಿಸಿದ ಅಧಿಕಾರಿಗಳು
ಜೆಎನ್ ಯು ವಿವಾದ: ಉಗ್ರರ ನಂಟು ಬಗ್ಗೆ ಶಂಕೆ ವ್ಯಕ್ತಪಡಿಸಿದ ಅಧಿಕಾರಿಗಳು
ನವದೆಹಲಿ; ಜೆಎನ್ ಯು ವಿವಾದ ದಿನದಿಂದ ದಿನಕ್ಕೆ ಹೊಸ ತಿರುವು ಪಡೆದುಕೊಳ್ಳುತ್ತಿದ್ದು, ಇದೀಗ ವಿದ್ಯಾರ್ಥಿಗಳ ಪ್ರತಿಭಟನೆ ಹಿಂದ ಉಗ್ರರ ನಂಟಿರುವುದಾಗಿ ಅಧಿಕಾರಿಗಲು ಶಂಕೆ ವ್ಯಕ್ತಪಡಿಸಿದ್ದಾರೆ. 
ಜೆಎನ್ ಯು ದೇಶದ್ರೋಹಿ ವಿಷಯಕ್ಕೆ ಸಂಬಂಧಿಸಿದ್ದು, ಪ್ರಕರಣ ಸಂಬಂಧ ಉಗ್ರರ ನಂಟಿರುವ ಹಲವು ಅನುಮಾನಗಳು ಮೂಡಿದ್ದು,  ಪ್ರಕರಣವನ್ನು ವಿಶೇಷ ತನಿಖಾ ತಂಡ ತನಿಖೆ ನಡೆಸುತ್ತಿದೆ ಎಂದು ಸ್ಥಳೀಯ ಪೊಲೀಸರು ಹೇಳಿಕೊಂಡಿದ್ದಾರೆಂದು ಹೇಳಲಾಗುತ್ತಿದೆ. 
ಜೆಎನ್ ಯು ವಿವಿಯಲ್ಲಿ ವಿದ್ಯಾರ್ಥಿಗಳು ದೇಶ ವಿರೋಧಿ ಘೋಷಣೆಗಳನ್ನು ಕೂಗುತ್ತಿದ್ದು, ಘೋಷಣೆಯನ್ನು ಎಬಿವಿಪಿ ಕಾರ್ಯಕರ್ತರು ಕೂಗಿದ್ದರು ಎಂದು ಆರೋಪಗಳು ಕೇಳಿಬರುತ್ತಿದೆ. ಆದರೆ, ಪ್ರಕರಣ ಸಂಬಂಧ ಸ್ಪಷ್ಟನೆ ಈ ವರೆಗೂ ತಿಳಿದುಬಂದಿಲ್ಲ. ತನಿಖೆಯಿಂದ ಸತ್ಯಾಸತ್ಯತೆ ತಿಳಿದುಬರಲಿದೆ. ಪ್ರಕರಣ ಸಂಬಂಧ ತನಿಖೆ ನಡೆಸುವಂತೆ ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಅವರು ಉಪಮುಖ್ಯಮಂತ್ರಿ ಅವರಿಗೆ ಈ ಹಿಂದೆ ಸೂಚನೆ ನೀಡಿದ್ದರು. 
ಎಬಿವಿಪಿ ಕಾರ್ಯಕರ್ತರು ದೇಶ ದ್ರೋಹಿ ಘೋಷಣೆಗಳನ್ನು ಕೂಗಿದ್ದಾರೆಂಬ ಆರೋಪವನ್ನು ಬಿಜೆಪಿ ಸೇರಿದ ವಿದ್ಯಾರ್ಥಿಯೊಬ್ಬ ತಿರಸ್ಕರಿಸಿದ್ದು, ಕಾರ್ಯಕರ್ತರು ದೇಶ ವಿರೋಧಿ ಘೋಷಣೆಗಳನ್ನು ಕೂಗಿರುವ ವಿಡಿಯೋಗಳು ಇದೀಗ ಸಾಮಾಜಿಕ ಜಾಲತಾಣದಾದ್ಯಂತ ಹರಿದಾಡೂತ್ತಿದೆ. ಆದರೆ, ಇದೊಂದು ನಕಲಿ ವಿಡಿಯೋ ಆಗಿದ್ದು, ಪ್ರಕರಣವನ್ನು ಸೈಬರ್ ಅಪರಾಧದ ಅಡಿಯಲ್ಲಿ ದಾಖಲಿಸಲಾಗುತ್ತದೆ ಎಂದು ಹೇಳಿದ್ದಾರೆ. 
ನಿನ್ನೆಯಷ್ಟೇ ವಿದ್ಯಾರ್ಥಿಗಳ ಪ್ರತಿಭಟನೆಗೆ ಬೆಂಬಲ ವ್ಯಕ್ತಪಡಿಸಿದ್ದ ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿಯವರಿಗೆ ವಿದ್ಯಾರ್ಥಿ ಸಂಘಟನೆಗಳು ಕಪ್ಪು ಬಾವುಟಗಳನ್ನು ಪ್ರದರ್ಶಿಸಿದ್ದವು. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com