ಬಿಜೆಪಿ ನಾಯಕ ವಿಶೇಶ್ವರ್ ಓಜಾ ಕೊಲೆ: ಇಬ್ಬರು ಆರೋಪಿಗಳ ಬಂಧನ

ಬಿಹಾರ ಬಿಜೆಪಿ ರಾಜ್ಯ ಉಪಾಧ್ಯಕ್ಷ ವಿಶೇಶ್ವರ್ ಓಜಾ ಕೊಲೆ ಪ್ರಕರಣ ಸಂಬಂಧ ಭಾನುವಾರ ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.
ವಿಶೇಶ್ವರ ಓಜಾ
ವಿಶೇಶ್ವರ ಓಜಾ
Updated on: 
ಪಾಟ್ನಾ: ಬಿಹಾರ ಬಿಜೆಪಿ ರಾಜ್ಯ ಉಪಾಧ್ಯಕ್ಷ ವಿಶೇಶ್ವರ್ ಓಜಾ ಕೊಲೆ ಪ್ರಕರಣ ಸಂಬಂಧ ಭಾನುವಾರ ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.
ಶನಿವಾರ ಸಂಜೆ ಬಿಹಾರದ ಬಿಜೆಪಿ ನಾಯಕ ವಿಶೇಶ್ವರ್ ಓಜಾರನ್ನು ದುಷ್ಕರ್ಮಿಗಳು ಗುಂಡಿಕ್ಕಿ ಕೊಲೆ ಮಾಡಿದ್ದರು. ಪ್ರಕರಣ ದಾಖಲಿಸಿಕೊಂಡಿದ್ದ ಪೊಲೀಸರು ತನಿಖೆ ಕೈಗೊಂಡಿದ್ದು, ಇದುವರೆಗೆ ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ.
ಹರೇಂದ್ರ ಸಿಂಗ್ ಹಾಗೂ ಭುವಾ ಸಿಂಗ್ ಬಂಧಿತ ಆರೋಪಿಗಳಾಗಿದ್ದು, ಪ್ರಕರಣ ಸಂಬಂಧ ಇನ್ನೂ ಐವರನ್ನು ವಶಕ್ಕೆ ಪಡೆದಿರುವ ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ ಎಂದು ಶಹಬಾದ್ ವಲಯ ಡಿಐಜಿ ಎ ರೆಹಮಾನ್ ಅವರು ಹೇಳಿದ್ದಾರೆ.
ಮದುವೆ ಕಾರ್ಯಕ್ರಮವೊಂದನ್ನು ಮುಗಿಸಿ ಹಿಂದಿರುಗುತ್ತಿರುವಾಗ, ಓಜಾ ಅವರನ್ನು ಗುಂಡಿಕ್ಕಿ ಕೊಲ್ಲಲಾಗಿತ್ತು. ಬಿಹಾರದ ಬಿಜೆಪಿ ರಾಜ್ಯ ಉಪಾಧ್ಯಕ್ಷರಾಗಿದ್ದ ಓಜಾ ಇತ್ತೀಚಿನ ಚುನಾವಣೆಯಲ್ಲಿ ಶಾಹ್ ಪುರ್ ನಿಂದ ಪ್ರತಿನಿಧಿಸಿ ಸೋಲುಕಂಡಿದ್ದರು. ಮೂಲಗಳ ಪ್ರಕಾರ ಕೊಲೆ ಪ್ರಕರಣಗಳಲ್ಲಿ ಇವರ ಹೆಸರು ಕೇಳಿ ಬಂದಿತ್ತು. ಇತ್ತೀಚಿನ ದಿನಗಳಲ್ಲಿ ಬಿಹಾರ್ ರಾಜ್ಯದಲ್ಲಿ ರಾಜಕೀಯ ನಾಯಕರ ಹತ್ಯೆಗಳು ಹೆಚ್ಚಾಗಿದೆ ಎಂದು ಹೇಳಲಾಗುತ್ತಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com