ಛಂಡೀಗರ್: ತೀವ್ರ ನಿಗಾ ಘಟಕ(ಐಸಿಯು)ದಲ್ಲಿ ಪೊಲೀಸ್ ಪತ್ನಿಯ ಮೇಲೆ ಅಪರಿಚಿತ ವ್ಯಕ್ತಿಯೊಬ್ಬ ಅತ್ಯಾಚಾರವೆಸಗಿರುವ ಘಟನೆ ಹರಿಯಾಣದಲ್ಲಿರುವ ಖಾಸಗಿ ಆಸ್ಪತ್ರೆಯೊಂದರಲ್ಲಿ ಶನಿವಾರ ರಾತ್ರಿ ನಡೆದಿದೆ.
ಮಗುವೊಂದಕ್ಕೆ ಜನ್ಮ ನೀಡಿದ ಪೊಲೀಸ್ ಪತ್ನಿ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಬೆಳಿಗ್ಗೆ 3.30ರ ಸಮಯದಲ್ಲಿ ವರ್ನಾ ಕಾರಿನಲ್ಲಿ ಬಂದ ವ್ಯಕ್ತಿಯೊಬ್ಬ ಐಸಿಯುಗೆ ತೆರಳಿರಿವುದು ಸಿಸಿಟಿವಿಯಲ್ಲಿ ಸೆರೆಯಾಗಿದೆ. ಐಸಿಯುಗೆ ತೆರಳಿ ಮಹಿಳೆ ಮೇಲೆ ಅತ್ಯಾಚಾರ ಮಾಡಿ ಹೊರಗೆ ಬಂದ ವ್ಯಕ್ತಿಗೆ ಸಿಸಿಟಿವಿ ಇರುವುದು ಗೊತ್ತಾಗಿ, ಮೆಲ್ಲಗೇ ಅಲ್ಲಿಂದ ತಲೆಮರೆಸಿಕೊಂಡು ಹೊರ ಹೋಗಿರುವ ದೃಶ್ಯವು ಸಿಸಿಟಿವಿಯಲ್ಲಿ ಸೆರೆಯಾಗಿದೆ.
ಪೊಲೀಸ್ ಠಾಣೆಯಲ್ಲಿ ಐಪಿಸಿ ಸೆಕ್ಷನ್ 376ರಡಿ ಪ್ರಕರಣ ದಾಖಲಾಗಿದ್ದು, ಆರೋಪಿಯ ಪತ್ತೆಗೆ ಕಾರ್ಯಾಚರಣೆ ಕೈಗೊಂಡಿದ್ದಾರೆ. ಅತ್ಯಾಚಾರಕ್ಕೊಳಗಾದವರ ಸಂಬಂಧಿಕರು ಆಸ್ಪತ್ರೆಯ ಸಿಬ್ಬಂದಿ ಮೇಲೆ ಆಕ್ರೋಶ ವ್ಯಕ್ತಪಡಿಸಿದ್ದು, ಸಿಬ್ಬಂದಿ ನಿರ್ಲಕ್ಷ್ಯವೇ ಈ ಅನಾಹುತಕ್ಕೆ ಕಾರಣ ಎಂದು ಆರೋಪಿಸಿದ್ದಾರೆ.