ಲೋಕಸಭೆಯಲ್ಲಿ ಕಾಂಗ್ರೆಸ್‌ಗೆ ಅಧಿಕೃತ ಪ್ರತಿಪಕ್ಷ ಸ್ಥಾನ: ಅರ್ಜಿ ತಿರಸ್ಕರಿಸಿದ ಸುಪ್ರೀಂ

ಲೋಕಸಭೆಯಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಅಧಿಕೃತ ಪ್ರತಿಪಕ್ಷ ಸ್ಥಾನ ನೀಡಬೇಕೆಂದು ಹೇಳಿ ಸಲ್ಲಿಸಲಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಸುಪ್ರೀಂಕೋರ್ಟ್ ಸೋಮವಾರ ತಿರಸ್ಕರಿಸಿದೆ...
ಸುಪ್ರೀಂಕೋರ್ಟ್
ಸುಪ್ರೀಂಕೋರ್ಟ್
ನವದೆಹಲಿ; ಲೋಕಸಭೆಯಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಅಧಿಕೃತ ಪ್ರತಿಪಕ್ಷ ಸ್ಥಾನ ನೀಡಬೇಕೆಂದು ಹೇಳಿ ಸಲ್ಲಿಸಲಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಸುಪ್ರೀಂಕೋರ್ಟ್ ಸೋಮವಾರ ತಿರಸ್ಕರಿಸಿದೆ.
ಲೋಕಸಭೆಯಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಅಧಿಕೃತ ಪ್ರತಿಪಕ್ಷ ಸ್ಥಾನ ನೀಡಬೇಕೆಂದು ಹೇಳಿ ಸಾರ್ವಜನಿಕ ಹಿತಾಸಕ್ತಿ ಅರ್ಜಿಯೊಂದು ಸುಪ್ರೀಂನಲ್ಲಿ ದಾಖಲಾಗಿತ್ತು. ಈ ಅರ್ಜಿಯನ್ನು ಇಂದು ಪರಿಶೀಲಿಸಿರುವ ಸರ್ವೋಚ್ಛ ನ್ಯಾಯಾಲಯವು, ಕಾಂಗ್ರೆಸ್ ಪಕ್ಷಕ್ಕೆ ಅಧಿಕೃತ ಪ್ರತಿಪಕ್ಷ ಸ್ಥಾನ ಬೇಕಿದ್ದರೆ ಆ ಪಕ್ಷವೇ ಕೋರ್ಟ್ ನಲ್ಲಿ ಮನವಿ ಸಲ್ಲಿಸಲಿ ಎಂದು ಹೇಳಿದೆ, ಅಲ್ಲದೆ ಅರ್ಜಿಯನ್ನು ಪರಿಶೀಲಿನೆ ನಡೆಸಲು ತಿರಸ್ಕರಿಸಿದೆ. 
2014ರಲ್ಲಿ ಕೇಂದ್ರದಲ್ಲಿ ಬಿಜೆಪಿ ನೇತೃತ್ವದ ಎನ್ ಡಿಎ ಸರ್ಕಾರ ಅಧಿಕಾರಕ್ಕೆ ಬಂದ ನಂತರ ಕಾಂಗ್ರೆಸ್ ಪಕ್ಷ ಚುನಾವಣೆಯಲ್ಲಿ 55 ಸ್ಥಾನಗಳನ್ನು ಗೆದ್ದಿಲ್ಲ ಎಂಬ ಕಾರಣಕ್ಕೆ ಸ್ಪೀಕರ್ ಸುಮಿತ್ರಾ ಮಹಾಜನ್ ಅವರು ಅಧಿಕೃತ ಪ್ರತಿಪಕ್ಷ ಸ್ಥಾನ ನೀಡಲು ಸಾಧ್ಯವಿಲ್ಲ ಎಂದು ಹೇಳಿದ್ದರು. 1980-84ರ ಅವಧಿಯಲ್ಲಿ ಕೇಂದ್ರದಲ್ಲಿ ಯಾವುದೇ ಪಕ್ಷಕ್ಕೆ ಅಧಿಕೃತ ಪ್ರತಿಪಕ್ಷ ಸ್ಥಾನಮಾನ ಸಿಕ್ಕಿರಲಿಲ್ಲ. ನಿಯಮಗಳ ಪ್ರಕಾರ ಈ ಅವಧಿಯಲ್ಲೂ ಯಾವ ಪಕ್ಷಕ್ಕೂ ಅಧಿಕೃತ ಪ್ರತಿಪಕ್ಷ ಸ್ಥಾನಮಾನವನ್ನು ನೀಡಲು ಸಾಧ್ಯವಿಲ್ಲ ಎಂದಿದ್ದರು. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com