ನವದೆಹಲಿ: ಕೇಂದ್ರೀಯ ಕೈಗಾರಿಕಾ ಭದ್ರತಾ ಪಡೆಯ (ಸಿಐಎಸ್‌ಎಫ್) ಅಧಿಕಾರಿಯೊಬ್ಬರು ತಮಗೆ ನೀಡಲಾಗಿದ್ದ ಸರ್ವೀಸ್ ಗನ್ ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.
ದೆಹಲಿಯ ಬಿಜ್ವಾಸಾನ್ ನಲ್ಲಿ ಬೆಳಿಗ್ಗೆ 8 ಗಂಟೆಗೆ ಸಿಐಎಸ್‌ಎಫ್‌ನ ಅಸಿಸ್ಟೆಂಟ್ ಸಬ್ ಇನ್ಸ್ ಪೆಕ್ಟರ್ ರಾಜ್ ಸಿಂಗ್(58) ತಮಗೆ ನೀಡಲಾಗಿದ್ದ ಸರ್ಕಾರಿ ಗನ್ ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.
ಮೂರು ಸುತ್ತು ಗುಂಡು ಹಾರಿಸಿಕೊಂಡಿರುವ ರಾಜ್ ಸಿಂಗ್ ಅವರನ್ನು ಆಸ್ಪತ್ರೆಗೆ ಕರೆದೊಯ್ತುತ್ತಿರಬೇಕಾದರೆ ಮಾರ್ಗ ಮಧ್ಯೆ ಮೃತಪಟ್ಟಿದ್ದಾರೆ. ರಾಜ್ ಸಿಂಗ್ ಅವರು ಇಂದು ರಾತ್ರಿ ಇಂದಿರಾಗಾಂಧಿ ಇಂಟರ್ ನ್ಯಾಷನಲ್ ಏರ್ಪೋರ್ಟ್ ನಲ್ಲಿ ರಾತ್ರಿ ಪಾಳಿಗೆ ಹೋಗಬೇಕಿತ್ತು.
1980ರಲ್ಲಿ ಸಿಂಗ್ ಅವರು ಸಿಐಎಸ್‌ಎಫ್‌ಗೆ ಸೇರ್ಪಡೆಗೊಂಡಿದ್ದರು. ಮೇಲ್ನೋಟಕ್ಕೆ ಇದು ಆತ್ಮಹತ್ಯೆ ಎಂದು ಕಂಡು ಬರುತ್ತಿದ್ದು, ತನಿಖೆ ಆದೇಶ ನೀಡಲಾಗಿದೆ ಎಂದು ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.