ದೆಹಲಿ ಪೊಲೀಸ್ ಆಯುಕ್ತ ಬಿ.ಎಸ್. ಬಸ್ಸಿ
ದೇಶ
ಜೆಎನ್ ಯು ವಿವಾದ: ಕನ್ಹಯ್ಯ ವಿರುದ್ಧ ಸಾಕಷ್ಟು ಸಾಕ್ಷ್ಯ ಇದೆ- ಬಸ್ಸಿ
ಜವಾಹರಲಾಲ್ ನೆಹರು ವಿಶ್ವವಿದ್ಯಾಲಯ(ಜೆಎನ್ ಯು) ಪ್ರಕರಣ ಸಂಬಂಧ ಬಂಧಿತನಾಗಿರುವ ವಿದ್ಯಾರ್ಥಿ ಸಂಘದ ಅಧ್ಯಕ್ಷ ಕನ್ಹಯ್ಯ ಕುಮಾರ್ ವಿರುದ್ಧ ಸಾಕಷ್ಟು ಸಾಕ್ಷ್ಯಾಧಾರಗಳಿವೆ ಎಂದು...
ನವದೆಹಲಿ: ಜವಾಹರಲಾಲ್ ನೆಹರು ವಿಶ್ವವಿದ್ಯಾಲಯ(ಜೆಎನ್ ಯು) ಪ್ರಕರಣ ಸಂಬಂಧ ಪೊಲೀಸ್ ಬಂಧನದಲ್ಲಿರುವ ವಿದ್ಯಾರ್ಥಿ ಸಂಘದ ಅಧ್ಯಕ್ಷ ಕನ್ಹಯ್ಯ ಕುಮಾರ್ ವಿರುದ್ಧ ಸಾಕಷ್ಟು ಸಾಕ್ಷ್ಯಾಧಾರಗಳಿವೆ ಎಂದು ದೆಹಲಿ ಪೊಲೀಸ್ ಆಯುಕ್ತ ಬಿ.ಎಸ್. ಬಸ್ಸಿ ಅವರು ಬುಧವಾರ ಹೇಳಿದ್ದಾರೆ.
ಜೆಎನ್ ಯು ಆವರಣದಲ್ಲಿ ನಡೆದಿದೆ ಎಂದು ಆರೋಪಿಸಲಾಗಿರುವ ದೇಶ ವಿರೋಧಿ ಚಟುವಟಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ವಿದ್ಯಾರ್ಥಿ ಸಂಘದ ಅಧ್ಯಕ್ಷ ಕನ್ಹಯ್ಯ ಕುಮಾರ್ ವಿರುದ್ಧ ರಾಷ್ಟ್ರದ್ರೋಹ ಪ್ರಕರಣ ದಾಖಲಿಸಲಾಗಿತ್ತು. ಕನ್ಹಯ್ಯ ವಿರುದ್ಧ ದಾಖಲಾಗಿರುವ ಪ್ರಕರಣ ವಿರೋಧಿಸಿ ಹಲವು ಟೀಕೆಗಳು ವ್ಯಕ್ತವಾಗುತ್ತಿವೆ.
ಪ್ರಧಾನಮಂತ್ರಿ ಕಾರ್ಯಾಲಯಕ್ಕೆ ಭೇಟಿ ನೀಡಿದ ಸಂದರ್ಭ ಪತ್ರಕರ್ತರ ಜೊತೆ ಮಾತನಾಡಿದ ಬಸ್ಸಿ, ಕನ್ಹಯ್ಯ ವಿರುದ್ಧ ನಮ್ಮ ಬಳಿ ಸಾಕಷ್ಟು ಸಾಕ್ಷ್ಯಾಧಾರಗಳಿವೆ. ಕನ್ಹಯ್ಯಗೆ ಕ್ಲೀನ್ ಚಿಟ್ ನೀಡುವ ಪ್ರಶ್ನೆಯೇ ಇಲ್ಲ ಎಂದು ಹೇಳಿದರು.
Follow KannadaPrabha channel on WhatsApp
KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ