ಭಾರತ ವಿರೋಧಿ ಘೋಷಣೆ ಕೂಗಿದರೆ ಅವರನ್ನು ಕೊಂದುಹಾಕಿ: ಅರವಿಂದ ಕೇಜ್ರಿವಾಲ್

ಯಾರಾದರೂ ಭಾರತ ವಿರೋಧಿ ಘೋಷಣೆ ಕೂಗಿದರೇ ಅಂಥವರನ್ನು ಹಿಡಿದು ಕೊಲ್ಲಿ ಎಂದು ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಹೇಳಿದ್ದಾರೆ...
ಅರವಿಂದ್ ಕೇಜ್ರಿವಾಲ್
ಅರವಿಂದ್ ಕೇಜ್ರಿವಾಲ್
Updated on

ನವದೆಹಲಿ: ಯಾರಾದರೂ ಭಾರತ ವಿರೋಧಿ ಘೋಷಣೆ ಕೂಗಿದರೇ ಅಂಥವರನ್ನು ಹಿಡಿದು ಕೊಲ್ಲಿ ಎಂದು ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಹೇಳಿದ್ದಾರೆ.

ಪಟಿಯಾಲಾ ಹೌಸ್ ಕೋರ್ಟ್‌ನಲ್ಲಿ ನಡೆದ ಹಿಂಸಾಚಾರ ಸಂಬಂಧ ರಾಷ್ಟ್ರಪತಿ ಪ್ರಣಬ್ ಮುಖರ್ಜಿಯವರನ್ನು ತಮ್ಮ ಸಚಿವ ಸಂಪುಟದ ಆರು ಮಂದಿ ಮಂತ್ರಿಗಳೊಂದಿಗೆ ಭೇಟಿ ಮಾಡಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಕೇಜ್ರಿವಾಲ್, ಕೇಂದ್ರ ಸರಕಾರದಿಂದ ನಿರ್ದೇಶನವಿರದಿದ್ದಲ್ಲಿ ಹಿಂಸಾಚಾರ ನಡೆಯುವಾಗ ದೆಹಲಿ ಪೊಲೀಸರು ಮೂಕ ಪ್ರೇಕ್ಷಕರಾಗಿರುತ್ತಿರಲಿಲ್ಲ ಎಂದು ಕಿಡಿಕಾರಿದರು.

ದೆಹಲಿ ಪೊಲೀಸರು ಕೇಂದ್ರ ಸರಕಾರಕ್ಕೆ ವರದಿ ಸಲ್ಲಿಸುವುದರಿಂದ ನಡೆದ ಹಿಂಸಾಚಾರ ಘಟನೆಗೆ ಕೇಂದ್ರ ಸರಕಾರವನ್ನೇ ಹೊಣೆಯಾಗಿಸಬೇಕಾಗುತ್ತದೆ ಎಂದರು. ಇನ್ನು ದೆಹಲಿ ಪೊಲೀಸ್ ಆಯುಕ್ತ ಬಿ.ಎಸ್ ಬಸ್ಸಿ ಬಿಜೆಪಿ ಏಜೆಂಟ್ ರೀತಿ ವರ್ತಿಸುತ್ತಿದ್ದಾರೆ ಎಂದು ಆರೋಪಿಸಿದರು. ಇನ್ನು ಭಾರತ ವಿರೋಧಿ ಘೋಷಣೆಗಳನ್ನು ಕೂಗುವವರನ್ನು ಗುಂಡಿಕ್ಕಿ ಕೊಲ್ಲಿ ಎಂದು ಹೇಳಿದ್ದ ಆಪ್ ಸರ್ಕಾರದ ಸಚಿವ ಕಪಿಲ್ ಮಿಶ್ರಾ ಅವರಿಗೆ ದೂರವಾಣಿ ಮೂಲಕ ಕೊಲ್ಲುವ ಬೆದರಿಕೆ ಒಡ್ಡಲಾಗಿದೆ ಎಂದು ಆವರು ಆರೋಪಿಸಿದ್ದಾರೆ.
 
ಪಟಿಯಾಲಾ ಕೋರ್ಟ್‌ನಲ್ಲಿ ಪತ್ರಕರ್ತರು ಮತ್ತು ಜೆಎನ್‌ಯು ವಿದ್ಯಾರ್ಥಿಗಳ ಮೇಲೆ ನಡೆದ ದಾಳಿ ಸುಪ್ರೀಂಕೋರ್ಟ್‌ಗೆ ಸವಾಲಾಗಿ ಪರಿಣಮಿಸಿತ್ತು ಎಂದು ಆಮ್ ಆದ್ಮಿ ಪಕ್ಷದ ನಾಯಕ, ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಕಳವಳ ವ್ಯಕ್ತಪಡಿಸಿದ್ದಾರೆ

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com