ಸಿಐಸಿ ಮಾಹಿತಿ ಆಯುಕ್ತ ಹುದ್ದೆ ರೇಸ್ ನಲ್ಲಿ ಬಸ್ಸಿ ಹೆಸರಿಲ್ಲ?

ತಿಂಗಳಾಂತ್ಯಕ್ಕೆ ನಿವೃತ್ತಿಯಾಗಲಿರುವ ದೆಹಲಿಯ ಪೊಲೀಸ್ ಕಮಿಷನರ್ ಬಿಎಸ್ ಬಸ್ಸಿಗೆ ಕೇಂದ್ರ ಮಾಹಿತಿ ಆಯೋಗದಲ್ಲಿ ಮಾಹಿತಿ ಆಯುಕ್ತರ ಹುದ್ದೆ ಸಿಗುವ ಸಾಧ್ಯತೆ ಇಲ್ಲ ಎಂಬ ವರದಿ ಬಂದಿದೆ.
ದೆಹಲಿ ಪೊಲೀಸ್ ಕಮಿಷನರ್ ಬಸ್ಸಿ
ದೆಹಲಿ ಪೊಲೀಸ್ ಕಮಿಷನರ್ ಬಸ್ಸಿ

ನವದೆಹಲಿ: ತಿಂಗಳಾಂತ್ಯಕ್ಕೆ ನಿವೃತ್ತಿಯಾಗಲಿರುವ ದೆಹಲಿಯ ಪೊಲೀಸ್ ಕಮಿಷನರ್ ಬಿಎಸ್ ಬಸ್ಸಿಗೆ ಕೇಂದ್ರ ಮಾಹಿತಿ ಆಯೋಗದಲ್ಲಿ ಮಾಹಿತಿ ಆಯುಕ್ತರ ಹುದ್ದೆ ಸಿಗುವ ಸಾಧ್ಯತೆ ಇಲ್ಲ ಎಂಬ ವರದಿ ಬಂದಿದೆ.
ಮಾಹಿತಿ ಆಯುಕ್ತ ಹುದ್ದೆ ಆಕಾಂಕ್ಷಿಯಾಗಿರುವುದರ ಬಗ್ಗೆ ಪತ್ರಕರ್ತರು ಕೇಳಿದ ಪ್ರಶ್ನೆಗೆ ಪ್ರತಿಕ್ರಿಯೆ ನೀಡಿರುವ ಬಸ್ಸಿ, "ಅದು ನನಗೆ ಸಂಬಂಧಸಿದ ವಿಷಯವಲ್ಲ ಎಂದು ಹೇಳಿದ್ದಾರೆ. ಇತ್ತೀಚಿನ ವರದಿಗಳ ಪ್ರಕಾರ ಮಾಹಿತಿ ಆಯುಕ್ತ ಹುದ್ದೆಯ ಸಂಭಾವ್ಯರ ಪಟ್ಟಿಯಿಂದ ಬಸ್ಸಿ ಹೆಸರನ್ನು ಕೈಬಿಡಲಾಗಿದೆ ಎಂದು ತಿಳಿದುಬಂದಿದೆ. 
ಕೇಂದ್ರ ಮಾಹಿತಿ ಆಯೋಗದಲ್ಲಿ ಬಸ್ಸಿ ಅವರಿಗೆ ಆಯುಕ್ತರ ಹುದ್ದೆ ನೀಡುವುದಕ್ಕೆ ಕಾಂಗ್ರೆಸ್ ತೀವ್ರ ವಿರೋಧ ವ್ಯಕ್ತಪಡಿಸಿದೆ. ಜೆಎನ್ ಯು ವಿವಾದವನ್ನು ಸರಿಯಾಗಿ ನಿರ್ವಹಣೆ ಮಾಡದೇ ಇರುವುದಕ್ಕೆ ಆಕ್ರೋಶಗೊಂಡಿರುವ ಕಾಂಗ್ರೆಸ್, ಬಸ್ಸಿ ಅವರನ್ನು ದೆಹಲಿ ಪೊಲೀಸ್ ಆಯುಕ್ತರ ಹುದ್ದೆಯಿಂದಲೂ ವಜಾಗೊಳಿಸಬೇಕೆಂದು ಆಗ್ರಹಿಸಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com