
ದೆಹಲಿ: ನರೇಂದ್ರ ಮೋದಿ ಪ್ರಧಾನಿ ಹುದ್ದೆಗೆ ಈಗಲೂ ಅರ್ಹ ಅಭ್ಯರ್ಥಿಯಾಗಿದ್ದಾರೆ ಎಂಬುದು ಜನಭಿಪ್ರಾಯವಾಗಿದೆ ಎಂದು ಸಮೀಕ್ಷೆಯೊಂದು ತಿಳಿಸಿದೆ.
ಇಂಡಿಯಾ ಟುಡೇ ಮತ್ತು ಕಾರ್ವಿ ಇನ್ ಸೈಟ್ ನಡೆಸಿದ ಸರ್ವೆಯಲ್ಲಿ ಈ ಮಾಹಿತಿ ತಿಳಿದು ಬಂದಿದ್ದು, ಪ್ರಧಾನಿ ಮೋದಿಗೆ ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ ಪೈಪೋಟಿ ನೀಡುವ ಪ್ರಬಲ ಅಭ್ಯರ್ಥಿಯಾಗಿದ್ದಾರೆ ಎಂದು ತಿಳಿಸಿದೆ.
ಮುಂದಿನ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ ನೇತೃತ್ವದ ಎನ್ ಡಿಎ 286 ಲೋಕಸಭಾ ಕ್ಷೇತ್ರಗಳಲ್ಲಿ ಗೆಲುವು ಸಾಧಿಸಲಿದೆ ಎಂದು ಸಮೀಕ್ಷೆ ಹೇಳಿದೆ.
ಇನ್ನೂ ಮೋದಿ ಘೋಷಣೆಯಂತೆ ದೇಶದಲ್ಲಿ ಅಚ್ಚೇ ದಿನ್ ಇದೆಯೇ ಎಂಬ ಪ್ರಶ್ನೆಗೆ ಶೇ.40 ರಷ್ಟು ಮಂದಿ ಇದೆ ಎಂದು, ಶೇ.31 ರಷ್ಟು ಮಂದಿ ಇಲ್ಲ ಎಂದು ಹೇಳಿದ್ದರೇ. ಶೇ.22 ರಷ್ಟು ಮಂದಿ ಅದೇ ಪರಿಸ್ಥಿತಿ ಮುಂದುವರಿದಿದೆ ಎಂದು ಚುನಾವಣಾ ಸಮೀಕ್ಷೆಯಲ್ಲಿ ತಿಳಿಸಲಾಗಿದೆ.
Advertisement