ಸಮ ಬೆಸ ಯೋಜನೆ:ಮಹಿಳೆಯರಿಗೆ ವಿನಾಯಿತಿ ನೀಡಲು ಕೋರಿ ಸಲ್ಲಿಸಿದ್ದ ಪಿಐಎಲ್ ವಿಚಾರಣೆಗೆ ಹೈಕೋರ್ಟ್ ನಿರಾಕರಣೆ

ಸಮ-ಬೆಸ ಯೋಜನೆಯಡಿ ಮಹಿಳೆಯರಿಗೆ ವಿನಾಯಿತಿ ನೀಡಬೇಕು ಎಂದು ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಿಚಾರಣೆ ನಡೆಸಲು ದೆಹಲಿ ಹೈಕೋರ್ಟ್ ನಿರಾಕರಿಸಿದೆ....
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ

ನವದೆಹಲಿ: ಹೆಚ್ಚುತ್ತಿರುವ ವಾಯು ಮಾಲಿನ್ಯ ಕಡಿಮೆ ಮಾಡಲು ದೆಹಲಿ ಸರ್ಕಾರ ಜಾರಿಗೆ ತಂದಿರುವ ಸಮ-ಬೆಸ ಯೋಜನೆಯಡಿ ಮಹಿಳೆಯರಿಗೆ ವಿನಾಯಿತಿ ನೀಡಬೇಕು ಎಂದು ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಿಚಾರಣೆ ನಡೆಸಲು ದೆಹಲಿ ಹೈಕೋರ್ಟ್ ನಿರಾಕರಿಸಿದೆ.

ಈ ಅರ್ಜಿಯಲ್ಲಿ ಸಾರ್ವಜನಿಕ ಹಿತಾಸಕ್ತಿ ಎಂಬುದು ಎಲ್ಲಿಯೂ ಕಾಣುತ್ತಿಲ್ಲ. ಇದು ಪಬ್ಲಿಸಿಟಿಗಾಗಿ ಸಲ್ಲಿಸಿರುವ ಅರ್ಜಿಯಾಗಿದೆ ಎಂದು ಮುಖ್ಯ ನ್ಯಾಯಮೂರ್ತಿ ಜಿ ರೋಹಿಣಿ ಹಾಗೂ ಜಯಂತ್ ಅವರನ್ನೊಳಗೊಂಡ ವಿಭಾಗೀಯ ಪೀಠ ಅಭಿಪ್ರಾಯಪಟ್ಟಿದೆ.

ಮಹಿಳೆಯರಿಗೆ ಸಮ-ಬೆಸ ಯೋಜನೆಯಿಂದ ವಿನಾಯಿತಿ ನೀಡಬೇಕು ಎಂದು ಕೇಳಿರುವುದು ಅಪಕ್ವವಾಗಿದೆ. ಹೀಗಾಗಿ ಈ ಅರ್ಜಿಯ ವಿಚಾರಣೆಯನ್ನು ಈ ಹಂತದಲ್ಲಿ ನಡೆಸಲಾಗದು ಎಂದು ನ್ಯಾಯ ಪೀಠ ತಿಳಿಸಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com