

ನವದೆಹಲಿ: ದೇಶದ್ರೋಹ ಪ್ರಕರಣದಲ್ಲಿ ಬಂಧನಕ್ಕೊಳಗಾಗಿರುವ ಜೆಎನ್ ಯು ವಿದ್ಯಾರ್ಥಿ ಸಂಘಟನೆ ನಾಯಕ ಕನ್ಹಯ್ಯ ಕುಮಾರ್ ಜಾಮೀನು ಅರ್ಜಿ ವಿಚಾರಣೆ ನಡೆಸಲು ಸುಪ್ರೀಂ ಕೋರ್ಟ್ ನಿರಾಕರಿಸಿದೆ.
ಜಾಮೀನು ಪಡೆಯಲು ದೆಹಲಿ ಹೈಕೋರ್ಟ್ ಗೆ ಅರ್ಜಿ ಸಲ್ಲಿಸಲು ಸುಪ್ರೀಂ ಕೋರ್ಟ್ ಹೇಳಿದೆ. ಇದೇ ವೇಳೆ ಕನ್ಹಯ್ಯ ಕುಮಾರ್ ಗೆ ಸೂಕ್ತ ಭದ್ರತೆ ಒದಗಿಸಬೇಕೆಂದು ಸುಪ್ರೀಂ ಕೋರ್ಟ್ ಸೂಚನೆ ನೀಡಿದ್ದು, ದೆಹಲಿ ಹೈಕೋರ್ಟ್ ಕನ್ಹಯ್ಯ ಕುಮಾರ್ ಜಾಮೀನು ಅರ್ಜಿಯನ್ನು ತ್ವರಿತವಾಗಿ ವಿಚಾರಣೆ ಮಾಡಬೇಕೆಂದು ಸುಪ್ರೀಂ ಕೋರ್ಟ್ ಹೇಳಿದೆ. ಕನ್ಹಯ್ಯ ಕುಮಾರ್ ಪರ ಅರ್ಜಿ ಸಲ್ಲಿಸಿದ್ದ ವಕೀಲರು ತಮ್ಮ ಕಕ್ಷಿದಾರನಿಗೆ ಜೀವ ಬೆದರಿಕೆ ಇದೆ, ಆದ್ದರಿಂದ ಸೂಕ್ತ ಭದ್ರತೆ ನೀದಬೇಕೆಂದು ಸುಪ್ರೀಂ ಕೋರ್ಟ್ ಗೆ ಮನವಿ ಮಾಡಿದ್ದರು.