ದೇಶ

ಕೇಂದ್ರೀಯ ವಿವಿಗಳಲ್ಲಿ ರಾಷ್ಟ್ರಧ್ವಜ ಹಾರಾಟಕ್ಕೆ ಅಕ್ಷಯ್, ಧವನ್ ಬೆಂಬಲ

ದೇಶದ ಎಲ್ಲ 46 ಕೇಂದ್ರೀಯ ವಿಶ್ವವಿದ್ಯಾಲಯಗಳಲ್ಲಿ ಕಡ್ಡಾಯವಾಗಿ ಭಾರತದ ತ್ರಿವರ್ಣ ಧ್ವಜ ಹಾರಿಸಬೇಕು ಎನ್ನುವ ಕೇಂದ್ರ ಸರ್ಕಾರದ ಹೊಸ ನಿಯಮಕ್ಕೆ ಬಾಲಿವುಡ್ ನಟ ಅಕ್ಷಯ್...

ಕೇಂದ್ರೀಯ ವಿವಿಗಳಲ್ಲಿ ರಾಷ್ಟ್ರಧ್ವಜ ಹಾರಾಟಕ್ಕೆ ಅಕ್ಷಯ್, ಧವನ್ ಬೆಂಬಲ
ಅಕ್ಷಯ್ ಕುಮಾರ್, ಶಿಖರ್ ಧವನ್
Published On :

ದೇಶದ ಎಲ್ಲ 46 ಕೇಂದ್ರೀಯ ವಿಶ್ವವಿದ್ಯಾಲಯಗಳಲ್ಲಿ ಕಡ್ಡಾಯವಾಗಿ ಭಾರತದ ತ್ರಿವರ್ಣ ಧ್ವಜ ಹಾರಿಸಬೇಕು ಎನ್ನುವ ಕೇಂದ್ರ ಸರ್ಕಾರದ ಹೊಸ ನಿಯಮಕ್ಕೆ ಬಾಲಿವುಡ್ ನಟ ಅಕ್ಷಯ್ ಕುಮಾರ್ ಹಾಗೂ ಟೀಮ್ ಇಂಡಿಯಾ ಆರಂಭಿಕ ಶಿಖರ್ ಧವನ್ ಬೆಂಬಲ ವ್ಯಕ್ತಪಡಿಸಿದ್ದಾರೆ.

ತ್ರಿವರ್ಣಧ್ವಜ ದೇಶದ ಹೆಮ್ಮೆಯ ಪ್ರತೀಕಾ. ದೇಶಾದ್ಯಂತ ತ್ರಿವರ್ಣಧ್ವಜ ಹಾರಾಡಬೇಕು ಎಂದು ಅಕ್ಷಯ್ ಟ್ವೀಟ್ ಮಾಡಿದ್ದಾರೆ.

ಎಲ್ಲ ವಿವಿಗಳಲ್ಲೂ ತ್ರಿವರ್ಣ ಧ್ವಜ ಹಾರಾಡಬೇಕು. ಧ್ವಜ ನಮ್ಮ ದೇಶದ ಹೆಮ್ಮೆ. ದೇಶದಲ್ಲಿ ಜೀವಿಸುವ ಪ್ರತಿಯೊಬ್ಬ ಪ್ರಜೆಯೂ ದೇಶದ ವಿರುದ್ಧವಾಗಿ ಮಾತನಾಡಬಾರದು ಎನ್ನುವ ಆಶಯ ನನ್ನದು’ ಎಂದು ಖಾಸಗಿ ಸಮಾರಂಭವೊಂದರಲ್ಲಿ ಭಾಗವಹಿಸಿದ್ದ ಧವನ್ ಹೇಳಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.