

ನವದೆಹಲಿ: ಫೆ.23 ರಿಂದ ಬಜೆಟ್ ಅಧಿವೇಶನ ಪ್ರಾರಂಭವಾಗಲಿರುವ ಹಿನ್ನೆಲೆಯಲ್ಲಿ ಫೆ.20 ರಂದು ಕಾಂಗ್ರೆಸ್ ಪಕ್ಷದ ಸಭೆ ನಡೆಯಲಿದೆ. ಬಜೆಟ್ ಅಧಿವೇಶನದ ತಯಾರಿ ಬಗ್ಗೆ ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ ನೇತೃತ್ವದಲ್ಲಿ ಸಭೆ ನಡೆಯಲಿದೆ.
ಹೈದರಾಬಾದ್ ವಿವಿಯ ಸಂಶೋಧನಾ ವಿದ್ಯಾರ್ಥಿ ರೋಹಿತ್ ವೇಮುಲಾ ಆತ್ಮಹತ್ಯೆ ಸೇರಿದಂತೆ ಇತ್ತೀಚೆಗಿನ ಜೆಎನ್ ಯು ವಿವಾದದ ವರೆಗೆ ಕಾಂಗ್ರೆಸ್ ಪಕ್ಷ ಹಲವು ಪ್ರಕರಣದಲ್ಲಿ ಸರ್ಕಾರವನ್ನು ವಿರೋಧಿಸಿದ್ದು, ಬಜೆಟ್ ಅಧಿವೇಶನದಲ್ಲಿ ಸರ್ಕಾರವನ್ನು ಪ್ರಶ್ನಿಸಲು ಕಾರ್ಯತಂತ್ರ ರೂಪಿಸುತ್ತಿದೆ. ಬಜೆಟ್ ಅಧಿವೇಶನ ಕೇಂದ್ರ ಸರ್ಕಾರಕ್ಕೆ ಮಹತ್ವದ್ದಾಗಿದ್ದು ಅಧಿವೇಶನಕ್ಕೆ ಅಡ್ಡಿ ಉಂಟುಮಾಡದಂತೆ ಕೇಂದ್ರ ಸಚಿವ ಮುಕ್ತಾರ್ ಅಬ್ಬಾಸ್ ನಖ್ವಿ ಪ್ರತಿಪಕ್ಷಗಳಿಗೆ ಮನವಿ ಮಾಡಿದ್ದಾರೆ.