
ನವದೆಹಲಿ: ಹೈದರಾಬಾದ್ ವಿವಿಯಲ್ಲಿ ಆತ್ಮಹತ್ಯೆ ಮಾಡಿಕೊಂಡ ಸಂಶೋಧನಾ ವಿದ್ಯಾರ್ಥಿ ರೋಹಿತ್ ವೇಮುಲ ಪ್ರಕರಣಕ್ಕೆ ಸಂಬಂಧಿಸಿದಂತೆ ಸತ್ಯ ಶೋಧನಾ ಸಮಿತಿ ಇಬ್ಬರು ಸಚಿವರಿಗೆ ಕ್ಲೀನ್ ಚಿಟ್ ನೀಡಿದೆ.
ಇಬ್ಬರು ಸದಸ್ಯರಿದ್ದ ಸತ್ಯಶೋಧನಾ ಸಮಿತಿ ಕೇಂದ್ರ ಸಚಿವರುಗಳಾಗ ಸ್ಮೃತಿ ಇರಾನಿ ಮತ್ತು ಬಂಡಾರು ದತ್ತಾತ್ರೇಯ ಅವರುಗಳಿಗೆ ಪ್ರಕರಣದಿಂದ ಕ್ಲೀನ್ ಚಿಟ್ ನೀಡಿದೆ.
ಸಂಶೋಧನಾ ವಿದ್ಯಾರ್ಥಿ ರೋಹಿತ್ ವೇಮುಲ ಆತ್ಮಹತ್ಯೆ ಪ್ರಕರಣದಲ್ಲಿ ಕೇಂದ್ರ ಸಚಿವರುಗಳ ಪಾತ್ರವಿಲ್ಲ ಎಂದು ಮಾನವ ಸಂಪನ್ಮೂಲ ಸಚಿವಾಲಯಕ್ಕೆ ಸಮಿತಿ ವರದಿ ಸಲ್ಲಿಸಿದೆ.
ರೋಹಿತ್ ವೇಮುಲ ಆತ್ಮಹತ್ಯೆಗೆ ಕೇಂದ್ರ ಸಚಿವರುಗಳಾದ ಸ್ಮೃತಿ ಇರಾನಿ ಮತ್ತು ಬಂಡಾರು ದತ್ತಾತ್ರೇಯ ಕಾರಣರೆಂದು ಆರೋಪಿಸಲಾಗಿತ್ತು. ಈ ಇಬ್ಬರು ರಾಜೀನಾಮೆ ನೀಡಬೇಕು ಎಂದು ವಿಪಕ್ಷಗಳು ಆಗ್ರಹಿಸಿದ್ದವು.
Advertisement