ಕೇಂದ್ರದಿಂದ ರಾಜ್ಯಕ್ಕೆ 1,000 ಮೆಗಾವ್ಯಾಟ್ ವಿದ್ಯುತ್ ಪೂರೈಕೆಗೆ ಡಿಕೆಶಿ ಮನವಿ

ಶರಾವತಿ ವಿದ್ಯುದಾಗಾರದಲ್ಲಿ ಅಗ್ನಿ ಅನಾಹುತ ಸಂಭವಿಸಿದ ಹಿನ್ನಲೆಯಲ್ಲಿ ರಾಜ್ಯಕ್ಕೆ ಹೆಚ್ಚು ವಿದ್ಯುತ್ ಪೂರೈಕೆ ಮಾಡುವಂತೆ ಕೋರಿ ಇಂಧನ...
ಡಿಕೆ ಶಿವಕುಮಾರ್
ಡಿಕೆ ಶಿವಕುಮಾರ್
ಬೆಂಗಳೂರು: ಶರಾವತಿ ವಿದ್ಯುದಾಗಾರದಲ್ಲಿ ಅಗ್ನಿ ಅನಾಹುತ ಸಂಭವಿಸಿದ ಹಿನ್ನಲೆಯಲ್ಲಿ ರಾಜ್ಯಕ್ಕೆ ಹೆಚ್ಚು ವಿದ್ಯುತ್ ಪೂರೈಕೆ ಮಾಡುವಂತೆ ಕೋರಿ ಇಂಧನ ಸಚಿವ ಡಿಕೆ ಶಿವಕುಮಾರ್ ಕೇಂದ್ರ ಸರ್ಕಾರಕ್ಕೆ ಪತ್ರ ಬರೆದಿದ್ದಾರೆ.
ಶನಿವಾರ ಕೇಂದ್ರ ಇಂಧನ ರಾಜ್ಯ ಸಚಿವ ಪೀಯುಷ್ ಗೋಯಲ್ ಅವರನ್ನು ಭೇಟಿ ಮಾಡಿದ್ದು, 1,000 ಮೆಗಾ ವ್ಯಾಟ್ ವಿದ್ಯುತ್ ಪೂರೈಕೆ ಮಾಡುವಂತೆ ಮನವಿ ಮಾಡಿಕೊಂಡಿದ್ದಾರೆ. 
ಶರಾವತಿ ವಿದ್ಯುದಾಗಾರದಲ್ಲಿ 1,035 ಮೆಗಾ ವ್ಯಾಟ್ ವಿದ್ಯುತ್ ಉತ್ಪಾದನೆ ಆಗುತ್ತಿತ್ತು. ಆದರೆ, ಬೆಂಕಿ ಅವಘಡ ಸಂಭವಿಸಿದ ಹಿನ್ನಲೆಯಲ್ಲಿ ರಾಜ್ಯದಲ್ಲಿ ವಿದ್ಯುತ್ ಪೂರೈಕೆಗೆ ಅಡಚಣೆ ಉಂಟಾಗಿದೆ. 
ರಾಜ್ಯದಲ್ಲಿ ಈಗಾಗಲೇ ವಿದ್ಯುತ್ ಕೊರತೆ ಹೆಚ್ಚಾಗಿತ್ತು. ಇದರ ಬೆನ್ನಲ್ಲೇ, ಶರವಾತಿ ವಿದ್ಯುದಾಗಾರದಲ್ಲಿ ಅವಘಡ ಸಂಭವಿಸಿ ಸಂಪೂರ್ಣ ಭಸ್ಮವಾಗಿದೆ. ಇದನ್ನು ಸರಿಪಡಿಸಲು ನಾಲ್ಕೈದು ತಿಂಗಳು ಬೇಕಿದೆ. ಈ ಹಿನ್ನಲೆಯಲ್ಲಿ ಕೇಂದ್ರ ಸರ್ಕಾರ 1,000 ಮೆಗಾವ್ಯಾಟ್ ವಿದ್ಯುತ್ ಒದಗಿಸಬೇಕು ಎಂದು ಮನವಿ ಮಾಡಿಕೊಂಡಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com