ಪ್ಯಾಂಪೋರ್ ನಲ್ಲಿ ಮುಂದುವರೆದ ಉಗ್ರರ ಅಟ್ಟಹಾಸ: 7ಕ್ಕೇರಿದ ಸಾವಿನ ಸಂಖ್ಯೆ

ಜಮ್ಮು ಮತ್ತು ಕಾಶ್ಮೀರದ ಪ್ಯಾಂಪೋರ್ ನಲ್ಲಿ ಭಾರತೀಯ ಸೇನೆ ಹಾಗೂ ಉಗ್ರರ ನಡುವಿನ ಗುಂಡಿನ ಕಾಳಗ ಮುಂದುವರೆದಿದೆ. ಜೆಕೆಇಡಿಐ ಸರ್ಕಾರಿ ಕಟ್ಟಡವೊಂದರಲ್ಲಿ...
ಭಾರತೀಯ ಸೇನೆ
ಭಾರತೀಯ ಸೇನೆ

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಪ್ಯಾಂಪೋರ್ ನಲ್ಲಿ ಭಾರತೀಯ ಸೇನೆ ಹಾಗೂ ಉಗ್ರರ ನಡುವಿನ ಗುಂಡಿನ ಕಾಳಗ ಮುಂದುವರೆದಿದೆ. ಜೆಕೆಇಡಿಐ ಸರ್ಕಾರಿ ಕಟ್ಟಡದಲ್ಲಿ ಅಡಗಿರುವ ಉಗ್ರರ ದಾಳಿಗೆ ಐವರು ಯೋಧರು ಹುತಾತ್ಮರಾಗಿದ್ದು, ಓರ್ವ ಉಗ್ರನನ್ನು ಹತ್ಯೆ ಮಾಡಲಾಗಿದೆ.

ದಕ್ಷಿಣ ಕಾಶ್ಮೀರದ ಪ್ಯಾಂಪೋರ್​​'ನಲ್ಲಿ ಭಾರತೀಯ ಸೇನೆ ಹಾಗೂ ಉಗ್ರರ ನಡುವಿನ ಕಾಳಗ ಮುಂದುವರೆದಿದೆ. ಕಾಳಗದಲ್ಲಿ ಆರ್ಮಿ ಕ್ಯಾಪ್ಟನ್ ಪವನ್ ಕುಮಾರ್ ಸೇರಿ ನಾಲ್ವರು ಯೋಧರು ಹುತಾತ್ಮರಾಗಿದ್ದು, 14 ಯೋಧರಿಗೆ ಗಂಭೀರವಾಗಿ ಗಾಯಗೊಂಡಿದ್ದಾರೆ. ಓರ್ವ ನಾಗರಿಕ ಸಹ ಸಾವನ್ನಪ್ಪಿದ್ದಾನೆ.

ಜೆಕೆಇಡಿಐ ಕಟ್ಟಡದಲ್ಲಿ ಅಡಗಿ ಕುಳಿತಿರುವ ಉಗ್ರರ ಧಮನಕ್ಕೆ ಭಾರತೀಯ ಸೇನೆ ಪಣತೊಟ್ಟಿದ್ದು, ನಿರಂತರ ಕಾರ್ಯಾಚರಣೆ ನಡೆಸುತ್ತಿದ್ದಾರೆ. ಇಡಿಐ ಕಟ್ಟಡದಲ್ಲಿ ಉಗ್ರರು ಗ್ರೈನೇಡ್ ಸ್ಫೋಟಿಸಿದ ಪರಿಣಾಮ ಕಟ್ಟಡ ಬೆಂಕಿಗೆ ಆಹುತಿಯಾಗಿದ್ದು, ಕಟ್ಟಡದಿಂದ ದಟ್ಟ ಹೊಗೆ ಹೊರಬರುತ್ತಿದೆ. ಕಟ್ಟಡದಲ್ಲಿ ನಾಲ್ವರು ಉಗ್ರರು ಅಡಗಿರುವ ಶಂಕೆ ವ್ಯಕ್ತವಾಗಿದ್ದು. ಉಗ್ರರ ವಿರುದ್ಧ ಭಾರತೀಯ ಸೇನೆ ಗುಂಡಿನ ದಾಳಿ ನಡೆಸಿದೆ. ಆದರೂ ಯೋಧರು ಉಗ್ರರನ್ನು ಹೊಡೆದುರುಳಿಸುವ ಪಣ ತೊಟ್ಟಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com