ಈವ್ ಟೀಸಿಂಗ್: ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆಗೆ ಯತ್ನಿಸಿದ ಅಪ್ರಾಪ್ತೆ

ಇಬ್ಬರು ಹುಡುಗರು ಪ್ರತಿದಿನ ಚುಡಾಯಿಸುತ್ತಿದ್ದ ಹಿನ್ನಲೆಯಲ್ಲಿ ಮನನೊಂದು ಅಪ್ರಾಪ್ತೆಯೊಬ್ಬಳು ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆಗೆ...
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ
Updated on
ಮಥುರಾ: ಇಬ್ಬರು ಹುಡುಗರು ಪ್ರತಿದಿನ ಚುಡಾಯಿಸುತ್ತಿದ್ದ ಹಿನ್ನಲೆಯಲ್ಲಿ ಮನನೊಂದು ಅಪ್ರಾಪ್ತೆಯೊಬ್ಬಳು ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಉತ್ತರಪ್ರದೇಶದಲ್ಲಿ ನಡೆದಿದೆ.
12ನೇ ತರಗತಿ ವ್ಯಾಸಂಗ ಮಾಡುತ್ತಿರುವ 17 ವರ್ಷದ ಹುಡಗಿಯು ತನ್ನ ಮೇಲೆ ಸೀಮೆಎಣ್ಣೆ ಸುರಿದುಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದಾಳೆ ಎಂದು ಪೊಲೀಸರು ತಿಳಿಸಿದ್ದಾರೆ.
ಉತ್ತರ ಪ್ರದೇಶದ ಸುನ್ ರಖ್ ಎಂಬ ಹಳ್ಳಿಯಲ್ಲಿ ಈ ಘಟನೆ ನಡೆದಿದೆ. ಕಾಲೇಜು ಮುಗಿಸಿ ಮನೆಗೆ ಹೋಗುತ್ತಿರಬೇಕಾದರೆ, ಪ್ರತಿ ದಿನ ಇಬ್ಬರು ಹುಡುಗರು ಆಕೆಯನ್ನು ಚುಡಾಯಿಸುತ್ತಿದ್ದರಿಂದ ಮನನೊಂದು ಆಕೆ ಆತ್ಮಹತ್ಯೆಗೆ ಯತ್ನಿಸಿದ್ದಾಳೆ ಎಂದು ಹಿರಿಯ ಪೊಲೀಸ್ ಅಧಿಕಾರಿ ಮುಖುಲ್ ದ್ವಿವೇದಿ ತಿಳಿಸಿದ್ದಾರೆ.
ತ್ರೀವವಾಗಿ ಗಾಯಗೊಂಡಿರುವ ಆಕೆಯನ್ನು ಆಸ್ಪತ್ರೆಗೆ ದಾಖಲಿಸಿದ್ದು, ಸ್ಥಿತಿ ಗಂಭೀರವಾಗಿದೆ ಎಂದು ಅವರು ಹೇಳಿದ್ದಾರೆ.
ಆತ್ಮಹತ್ಯೆ ಯತ್ನಿಸಿದ ಅಪ್ರಾಪ್ತೆಯ ಹೇಳಿಕೆಯನ್ನು ಪಡೆಯಲಾಗಿದೆ. ಆಕೆ ಮನೋಜ್ ಮತ್ತು ರಾಜಬಾಬು ಎಂಬ ಇಬ್ಬರು ಹುಡುಗರು ಚುಡಾಯಿಸಿತ್ತಿದ್ದರು ಎಂದು ಹೇಳಿಕೆ ನೀಡಿದ್ದಾಳೆ. ಆರೋಪಿಗಳ ವಿರುದ್ಧ ಪ್ರಕರಣ ದಾಖಲಾಗಿದ್ದು, ಆರೋಪಿಗಳನ್ನು ಬಂಧಿಸಬೇಕು ಎಂದು ಅವರು ತಿಳಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com