7ನೇ ವೇತನ ಆಯೋಗ: ಕೇಂದ್ರ ಸರ್ಕಾರಿ ನೌಕರರಿಗೆ ಕನಿಷ್ಠ 26 ಸಾವಿರ ವೇತನ ನಿಗದಿಗೆ ಬೇಡಿಕೆ

ಏಳನೇ ವೇತನ ಆಯೋಗದ ಶಿಫಾರಸಿನಂತೆ ತಿಂಗಳಿಗೆ 18 ಸಾವಿರದ ಬದಲಿಗೆ 26 ಸಾವಿರ ರೂಪಾಯಿ ಕನಿಷ್ಠ ವೇತನ ನಿಗದಿಪಡಿಸಬೇಕೆಂದು ಕೇಂದ್ರ ಸರ್ಕಾರಿ...
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ

ನವದೆಹಲಿ: ಏಳನೇ ವೇತನ ಆಯೋಗದ ಶಿಫಾರಸಿನಂತೆ ತಿಂಗಳಿಗೆ 18 ಸಾವಿರದ ಬದಲಿಗೆ 26 ಸಾವಿರ ರೂಪಾಯಿ ಕನಿಷ್ಠ ವೇತನ ನಿಗದಿಪಡಿಸಬೇಕೆಂದು ಕೇಂದ್ರ ಸರ್ಕಾರಿ ನೌಕರರು ಒತ್ತಾಯಿಸಿದ್ದಾರೆ. ಒಂದು ವೇಳೆ ತಮ್ಮ ಬೇಡಿಕೆಯನ್ನು ಈಡೇರಿಸದಿದ್ದರೆ ಪ್ರತಿಭಟನೆ ನಡೆಸುವುದಾಗಿ ಎಚ್ಚರಿಕೆ ನೀಡಿದ್ದಾರೆ.

ಕೇಂದ್ರ ಸರ್ಕಾರಿ ನೌಕರರ ವೇತನವನ್ನು ತಿಂಗಳಿಗೆ 26 ಸಾವಿರ ನಿಗದಿಪಡಿಸಬೇಕು. 7ನೇ ವೇತನ ಆಯೋಗದ ಶಿಫಾರಸನ್ನು ಒಪ್ಪುವುದಿಲ್ಲ ಎಂ ದು ಸಿಬ್ಬಂದಿ ಸ್ಥಾಯಿ ಸಮಿತಿ ತಿಳಿಸಿದೆ.
7ನೇ ವೇತನ ಆಯೋಗದ ಶಿಫಾರಸ್ಸುಗಳನ್ನು ನಾವು ಒಪ್ಪಿಕೊಳ್ಳಲು ಸಾಧ್ಯವಿಲ್ಲ ಎಂದು ಸಮಿತಿ ಸದಸ್ಯರು ಒಮ್ಮತದ ಅಭಿಪ್ರಾಯಕ್ಕೆ ಬಂದಿದ್ದಾರೆ.

ಸೌಹಾರ್ದತೆಯಿಂದ ತಮ್ಮ ಬೇಡಕೆಗಳನ್ನು ಈಡೇರಿಸಬೇಕೆಂದು ಮನವಿ ಮಾಡಿರುವ ಸದಸ್ಯರು ತಮ್ಮ ಬೇಡಿಕೆಗಳನ್ನು ಈಡೇರಿಸದಿದ್ದರೆ ಏಪ್ರಿಲ್ 11ರಿಂದ ಮುಷ್ಕರ ನಡೆಸುವುದಾಗಿ ಎಚ್ಚರಿಕೆ ನೀಡಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com