6 ಮಹಿಳಾ ಪೊಲೀಸ್ ಠಾಣೆ ಸ್ಥಾಪನೆಗೆ ಒಪ್ಪಿಗೆ: ಡಿಜಿಪಿ

ಆರು ಮಹಿಳಾ ಪೊಲೀಸ್ ಠಾಣೆ ಸ್ಥಾಪನೆಗೆ ರಾಜ್ಯ ಸರ್ಕಾರ ಒಪ್ಪಿಗೆ ನೀಡಿದೆ ಎಂದು ಪೊಲೀಸ್ ಪ್ರಧಾನ ನಿರ್ದೇಶಕ ಓಂ ಪ್ರಕಾಶ್...
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ
ಚಿಕ್ಕಮಗಳೂರು: ಆರು ಮಹಿಳಾ ಪೊಲೀಸ್ ಠಾಣೆ ಸ್ಥಾಪನೆಗೆ ರಾಜ್ಯ ಸರ್ಕಾರ ಒಪ್ಪಿಗೆ ನೀಡಿದೆ ಎಂದು ಪೊಲೀಸ್ ಪ್ರಧಾನ ನಿರ್ದೇಶಕ ಓಂ ಪ್ರಕಾಶ್ ತಿಳಿಸಿದ್ದಾರೆ.
ಪತ್ರಕರ್ತರೊಂದಿಗೆ ಮಾತನಾಡಿದ ಅವರು, ಚಿಕ್ಕಮಗಳೂರು ಸೇರಿದಂತೆ ವಿವಿಧ ಕಡೆ ಆರು ಮಹಿಳಾ ಪೊಲೀಸ್ ಠಾಣೆಗೆ ಸರ್ಕಾರ ಒಪ್ಪಿಗೆ ನೀಡಿದೆ ಎಂದಿದ್ದಾರೆ.
ಅಷ್ಟೇ ಅಲ್ಲದೇ, ಮಾರ್ಚ್ 31ರೊಳಗೆ 100 ಹೆದ್ದಾರಿ ಗಸ್ತು ವಾಹನಗಳ ಪೂರೈಕೆಗೆ ಸರ್ಕಾರ ಸಮ್ಮತಿಸಿದೆ ಎಂದು ಅವರು, ಪೊಲೀಸ್ ಅಧಿಕಾರಿಗಳಿಗೆ ಜಾಗೃತಿ ತರಬೇತಿ ಕಾರ್ಯಕ್ರಮ ನಡೆಸಲಿದ್ದು, ಸಾರ್ವಜನಿಕರೊಂದಿಗೆ ಒರಟಾಗಿ ನಡೆದುಕೊಳ್ಳುವ ಪೊಲೀಸರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದ್ದಾರೆ.
ಈಗಾಗಲೇ ಪೊಲೀಸ್ ಇಲಾಖೆಗೆ ಬೇಕಾಗಿರುವ ಮೂಲ ಸೌಕರ್ಯಗಳನ್ನು ಒದಗಿಸುವಂತೆ ಹಾಗೂ ಪೊಲೀಸರ ಒತ್ತಡ ನಿವಾರಣೆಗೆ ವಿಶೇಷ ತರಬೇತಿ ಕಾರ್ಯಕ್ರಮಕ್ಕೆ ಅನುಮತಿ ಕೋರಿ ಸರ್ಕಾರಕ್ಕೆ ಪ್ರಸ್ತಾವನೆ ಕಳುಹಿಸಲಾಗಿದೆ ಎಂದು ಅವರು ತಿಳಿಸಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com