ಜೆಎನ್ ಯು ವಿದ್ಯಾರ್ಥಿಗಳನ್ನು ಬೆಂಬಲಿಸಿ ಅಲಹಾಬಾದ್ ನಲ್ಲಿ ಪ್ರತಿಭಟನೆ: ವಕೀಲರಿಂದ ಥಳಿತ

ಕನ್ಹಯ್ಯ ಕುಮಾರ್ ವಿರುದ್ಧ ದೇಶದ್ರೋಹ ಪ್ರಕರಣ ದಾಖಲಿಸಿರುವುದನ್ನು ಖಂಡಿಸಿ ಪ್ರತಿಭಟನೆ ನಡೆಸುತ್ತಿದ್ದ ಎಡಪಕ್ಷದ ಸಂಘಟನೆಗಳ ಕಾರ್ಯಕರ್ತರನ್ನು ಅಲಹಾಬಾದ್ ವಕೀಲರು ಥಳಿಸಿದ್ದಾರೆ.
ಜೆಎನ್ ಯು ವಿದ್ಯಾರ್ಥಿಗಳನ್ನು ಬೆಂಬಲಿಸಿದವರನ್ನು ಥಳಿಸುತ್ತಿರುವ ವಕೀಲರು(ಸಂಗ್ರಹ ಚಿತ್ರ)
ಜೆಎನ್ ಯು ವಿದ್ಯಾರ್ಥಿಗಳನ್ನು ಬೆಂಬಲಿಸಿದವರನ್ನು ಥಳಿಸುತ್ತಿರುವ ವಕೀಲರು(ಸಂಗ್ರಹ ಚಿತ್ರ)
Updated on: 

ಅಲಹಾಬಾದ್: ಜೆಎನ್ ಯು  ವಿದ್ಯಾರ್ಥಿ ಸಂಘಟನೆ ಮುಖಂಡ ಕನ್ಹಯ್ಯ ಕುಮಾರ್ ವಿರುದ್ಧ ದೇಶದ್ರೋಹ ಪ್ರಕರಣ ದಾಖಲಿಸಿರುವುದನ್ನು ಖಂಡಿಸಿ ಪ್ರತಿಭಟನೆ ನಡೆಸುತ್ತಿದ್ದ ಎಡಪಕ್ಷದ ಸಂಘಟನೆಗಳ ಕಾರ್ಯಕರ್ತರನ್ನು ಅಲಹಾಬಾದ್ ವಕೀಲರು ಥಳಿಸಿದ್ದಾರೆ.
ದೇಶದ್ರೋಹದ ಪ್ರಕರಣ ದಾಖಲಿಸಿರುವುದನ್ನು ವಿರೋಧಿಸಿ ಕಾರ್ಮಿಕ ಸಂಘಟನೆ ಕಾರ್ಯಕರ್ತರು ಹಾಗೂ ಸಿಪಿಐ(ಎಂ) ನ ಕಾರ್ಯಕರ್ತರು ಹಮ್ಮಿಕೊಂಡಿದ್ದ ಪ್ರತಿಭಟನಾ ಮೆರವಣಿಗೆ ಅಹಲಾಬಾದ್ ನ ಜಿಲ್ಲಾ ನ್ಯಾಯಾಲಯದ ಎದುರು ಹಾದುಹೋಗುವ ವೇಳೆ ವಕೀಲರು ಪ್ರತಿಭಟನಾ ನಿರತರನ್ನು ಥಳಿಸಿದ್ದಾರೆ ಎಂದು ಪೊಲೀಸ್ ಅಧಿಕಾರಿ ಸಮೀರ್ ಸಿಂಗ್ ಹೇಳಿದ್ದಾರೆ.
ಥಳಿತಕ್ಕೊಳಗಾದ ಪ್ರತಿಭಟನಾ ನಿರತರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು ವಕೀಲರ ವಿರುದ್ಧ ಪ್ರಕರಣ ದಾಖಲಾಗಿದೆ. ಜಿಲ್ಲಾಡಳಿತದಿಂದ ಅನುಮತಿ ಪಡೆಯದೇ ಪ್ರತಿಭಟನಾ ಮೆರವಣಿಗೆ ಹಮ್ಮಿಕೊಂಡಿದ್ದ ಪರಿಣಾಮ ಎಡಪಕ್ಷಗಳ ಕಾರ್ಯಕರ್ತರ ವಿರುದ್ಧವೂ ಪ್ರಕರಣ ದಾಖಲಾಗುವ ಸಾಧ್ಯತೆ ಇದೆ.  ಸಿಪಿಐ ಎಂಎಲ್ ಈ ಬಗ್ಗೆ ಹೇಳಿಕೆ ನೀಡಿದ್ದು, ಆರ್ ಎಸ್ ಎಸ್ ನವರು ಕರಿ ಕೋಟು ಧರಿಸಿ ಪ್ರತಿಭಟನಾ ನಿರತರನ್ನು ಥಳಿಸಿದ್ದಾರೆ ಎಂದು ಆರೋಪಿಸಿದೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com