ಕಾಂಗ್ರೆಸ್ ವಿರುದ್ಧ ಬಿಜೆಪಿ ಪ್ರತಿಭಟನೆ
ದೇಶ
ಕಾಂಗ್ರೆಸ್ ವಿರುದ್ಧ ದೆಹಲಿಯಲ್ಲಿ ಬಿಜೆಪಿ ಯುವ ಘಟಕ ಪ್ರತಿಭಟನೆ
ಕಾಂಗ್ರೆಸ್ ಪಕ್ಷದ ವಿರುದ್ಧ ನವದೆಹಲಿಯಲ್ಲಿ ಬಿಜೆಪಿ ಯುವ ಘಟಕ ಪ್ರತಿಭಟನೆ ನಡೆಸಿದೆ.
ನವದೆಹಲಿ: ಕಾಂಗ್ರೆಸ್ ಪಕ್ಷದ ವಿರುದ್ಧ ನವದೆಹಲಿಯಲ್ಲಿ ಬಿಜೆಪಿ ಯುವ ಘಟಕ ಪ್ರತಿಭಟನೆ ನಡೆಸಿದೆ.
ಕಾಂಗ್ರೆಸ್ ಪಕ್ಷ ದೇಶವಿರೋಧಿ ದೃಷ್ಟಿಕೋನಗಳನ್ನು ಬೆಂಬಲಿಸುತ್ತಿದೆ ಎಂದು ಆರೋಪಿಸಿ ಬಿಜೆಪಿ ಪ್ರತಿಭಟನೆ ನಡೆಸಿದ್ದು ಪಕ್ಷದ ಯುವ ಘಟಕದ ಅಧ್ಯಕ್ಷ ಅನುರಾಗ್ ಠಾಕೂರ್ ನೇತೃತ್ವದಲ್ಲಿ ನೂರಾರು ಕಾರ್ಯಕರ್ತರು ಪ್ರತಿಭಟನಾ ಮೆರವಣಿಗೆಯಲ್ಲಿ ಭಾಗವಹಿಸಿದ್ದರು.
ಅಶೋಕಾ ರಸ್ತೆಯಿಂದ ಪ್ರಾರಂಭವಾದ ಪ್ರತಿಭಟನಾ ಮೆರವಣಿಗೆ ಜನ್ ಪಥ್ ನಲ್ಲಿ ಅಂತ್ಯಗೊಂಡಿತು. ದೇಶವಿರೋಧಿ ಘೋಷಣೆಗಳ ಬಗ್ಗೆ ಸಂಸತ್ ನಲ್ಲಿ ನಡೆದ ಚರ್ಚೆಯಲ್ಲಿ, ದೇಶವಿರೋಧಿ ಘೋಷಣೆ ಕೂಗಿದ ವಿದ್ಯಾರ್ಥಿಗಳನ್ನು ಸಮರ್ಥಿಸಿಕೊಂಡಿದ್ದಕ್ಕಾಗಿ ಬಿಜೆಪಿ ಸಂಸದ ಅನುರಾಗ್ ಠಾಕೂರ್, ಕೇಂದ್ರ ಸಚಿವೆ ಸ್ಮೃತಿ ಇರಾನಿ, ಅರುಣ್ ಜೇಟ್ಲಿ ಕಾಂಗ್ರೆಸ್ ಪಕ್ಷವನ್ನು ತರಾಟೆಗೆ ತೆಗೆದುಕೊಂಡಿದ್ದರು.
Follow KannadaPrabha channel on WhatsApp
KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ