ಜೆಎನ್ ಯು ವಿವಾದ: ಮತ್ತೊಬ್ಬ ವಿದ್ಯಾರ್ಥಿ ಬಂಧನ

ಜೆಎನ್ ಯು ವಿವಾದಕ್ಕೆ ಸಂಬಂಧಿಸಿ ವಿದ್ಯಾರ್ಥಿ ಸಂಘದ ಅಧ್ಯಕ್ಷ ಕನ್ಹಯ್ಯ ಸೇರಿ ಈಗಾಗಲೇ ಇಬ್ಬರು ವಿದ್ಯಾರ್ಥಿಗಳು ಬಂಧಿತರಾಗಿರುವ ಬೆನ್ನಲ್ಲೇ ಇದೀಗ ಮತ್ತೊಬ್ಬ ವಿದ್ಯಾರ್ಥಿಯನ್ನು ದೆಹಲಿ ಪೊಲೀಸರು ಬಂಧನಕ್ಕೊಳಪಡಿಸಿದ್ದು, ಶನಿವಾರ ತನಿಖೆ ನಡೆಸುತ್ತಿದ್ದಾರೆಂದು ತಿಳಿದುಬಂದಿದೆ...
ಜೆಎನ್ ಯು ವಿವಾದ: ಮತ್ತೊಬ್ಬ ವಿದ್ಯಾರ್ಥಿ ಬಂಧನ
ಜೆಎನ್ ಯು ವಿವಾದ: ಮತ್ತೊಬ್ಬ ವಿದ್ಯಾರ್ಥಿ ಬಂಧನ

ನವದೆಹಲಿ: ಜೆಎನ್ ಯು ವಿವಾದಕ್ಕೆ ಸಂಬಂಧಿಸಿ ವಿದ್ಯಾರ್ಥಿ ಸಂಘದ ಅಧ್ಯಕ್ಷ ಕನ್ಹಯ್ಯ ಸೇರಿ ಈಗಾಗಲೇ ಇಬ್ಬರು ವಿದ್ಯಾರ್ಥಿಗಳು ಬಂಧಿತರಾಗಿರುವ ಬೆನ್ನಲ್ಲೇ ಇದೀಗ ಮತ್ತೊಬ್ಬ ವಿದ್ಯಾರ್ಥಿಯನ್ನು ದೆಹಲಿ ಪೊಲೀಸರು ಬಂಧನಕ್ಕೊಳಪಡಿಸಿದ್ದು, ಶನಿವಾರ ತನಿಖೆ ನಡೆಸುತ್ತಿದ್ದಾರೆಂದು ತಿಳಿದುಬಂದಿದೆ.

ಜವಾಹರ್ ಲಾಲ್ ನೆಹರು ವಿಶ್ವವಿದ್ಯಾಲಯದಲ್ಲಿ ನಡೆಯಲಿದೆ ಎನ್ನಲಾಗಿರುವ ದೇಶ ದ್ರೋಹ ಪ್ರಕರಣ ಸಂಬಂಧ ಕೆಲವು ದಿನಗಳ ಹಿಂದಷ್ಟೇ ಉಮರ್ ಖಾಲಿದ್ ಹಾಗೂ ಅನಿರ್ಬಾನ್ ಭಟ್ಟಾಚಾರ್ಯ ಇಬ್ಬರು ವಿದ್ಯಾರ್ಥಿಗಳ ಪೊಲೀಸರಿಗೆ ಶರಣಾಗಿದ್ದರು. ಇದೀಗ ಇದೇ ಘಟನೆಗೆ ಸಂಬಂಧಿಸಿ ದೇಶದ್ರೋಹ ಪ್ರಕರಣ ಎದುರಿಸುತ್ತಿರುವ ಆಶುತೋಷ್ ಕುಮಾರ್ ಎಂಬ ವಿದ್ಯಾರ್ಥಿಯನ್ನು ಪೊಲೀಸರು ಬಂಧನಕ್ಕೊಳಪಡಿಸಿದ್ದು, ತನಿಖೆ ನಡೆಸುತ್ತಿದ್ದಾರೆ.

ಜೆಎನ್ ಯು ಪ್ರಕರಣ ಸಂಬಂಧ ವಿದ್ಯಾರ್ಥಿ ಸಂಘದ ಅಧ್ಯಕ್ಷ ಕನ್ಹಯ್ಯ ಕುಮಾರ್, ಉಮರ್ ಖಾಲಿದ್. ಅನಿರ್ಬಾನ್ ಭಟ್ಟಾಚಾರ್ಯ, ರಾಮ ನಾಗ, ಆಶುತೋಷ್ ಹಾಗೂ ಅನಂತ್ ಕುಮಾರ್ ಎಂಬ ಐವರು ವಿದ್ಯಾರ್ಥಿಗಳ ವಿರುದ್ಧ ದೆಹಲಿ ಪೊಲೀಸರು ಫೆ.20 ರಂದು ಶರಣಾಗುವಂತೆ ನೋಟಿಸ್ ಜಾರಿ ಮಾಡಿದ್ದರು.

ಪ್ರಕರಣ ಬೆಳಕಿಗೆ ಬರುತ್ತಿದ್ದಂತೆ ಪೊಲೀಸರು ವಿದ್ಯಾರ್ಥಿ ಸಂಘದ ಅಧ್ಯಕ್ಷ ಕನ್ಹಯ್ಯನನ್ನು ಬಂಧನಕ್ಕೊಳಪಡಿಸಿದ್ದರು. ಆದರೆ ಉಳಿದ ನಾಲ್ವರು ಕಣ್ಮರೆಯಾಗಿದ್ದರು. ನಂತರ ಕೆಲವು ದಿನಗಳ ಹಿಂದಷ್ಟೇ ಉಮರ್ ಹಾಗೂ ಅನಿರ್ಬಾನ್ ಎಂಬ ವಿದ್ಯಾರ್ಥಿಗಳು ಪೊಲೀಸರ ಬಳಿ ಶರಣಾಗಿದ್ದರು. ಇದೀಗ ಇದೇ ಗುಂಪಿಗೆ ಸೇರಿದ ಮತ್ತೊಬ್ಬ ವಿದ್ಯಾರ್ಥಿಯನ್ನು ಪೊಲೀಸರು ಬಂಧಿಸಿದ್ದಾರೆ. ಇದರಂತೆ ಉಳಿದ ಇಬ್ಬರು ವಿದ್ಯಾರ್ಥಿಗಳು ಶರಣಾಗಬೇಕಿದೆ.

ಈ ಹಿಂದೆ ಪೊಲೀಸರಿಗೆ ಶರಣಾಗಿದ್ದ ಖಾಲಿದ್ ಹಾಗೂ ಭಟ್ಟಾಚಾರ್ಯ ಇಬ್ಬರು ವಿದ್ಯಾರ್ಥಿಗಳ ಪೊಲೀಸ್ ಕಸ್ಟಡಿ ಇಂದಿಗೆ ಅಂತ್ಯಗೊಳ್ಳುತ್ತಿದ್ದು, ದೆಹಲಿ ಪೊಲೀಸರು ಇಂದು ನ್ಯಾಯಾಲಯದ ಬಳಿ ಇಬ್ಬರನ್ನು ಹಾಜರುಪಡಿಸಲಿದ್ದಾರೆ. ಇದರಂತೆ ಪ್ರಕರಣ ಸಂಬಂಧ ಈಗಾಗಲೇ ಬಂಧನಕ್ಕೊಳಗಾಗಿರುವ ವಿದ್ಯಾರ್ಥಿಗಳ ಪೊಲೀಸ್ ಕಸ್ಟಡಿ ವಿಚಾರದ ಸಂಗತಿಗಳನ್ನು ಗೌಪ್ಯವಾಗಿಡುವಂತೆ ದೆಹಲಿ ನ್ಯಾಯಾಲಯವು ಪೊಲೀಸರಿಗೆ ಸೂಚನೆ ನೀಡಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com