ಆಸ್ಪತ್ರೆಯಿಂದ ಬಿಡುಗಡೆಗೊಂಡ ಪ್ರಧಾನಿ ತಾಯಿ

ಅನಾರೋಗ್ಯ ಪೀಡಿತರಾದಿ ಆಸ್ಪತ್ರೆಗೆ ದಾಖಲಾಗಿದ್ದ ಪ್ರಧಾನಮಂತ್ರಿ ನರೇಂದ್ರ ಮೋದಿಯವರ ತಾಯಿ ಹೀರಾ ಬೆನ್ ಅವರು ಶನಿವಾರ ಆಸ್ಪತ್ರೆಯಿಂದ ಬಿಡುಗಡೆಗೊಂಡಿದ್ದಾರೆ...
ಆಸ್ಪತ್ರೆಯಿಂದ ಬಿಡುಗಡೆಗೊಂಡ ಪ್ರಧಾನಿ ತಾಯಿ
ಆಸ್ಪತ್ರೆಯಿಂದ ಬಿಡುಗಡೆಗೊಂಡ ಪ್ರಧಾನಿ ತಾಯಿ

ಅಹ್ಮದಾಬಾದ್: ಅನಾರೋಗ್ಯ ಪೀಡಿತರಾದಿ ಆಸ್ಪತ್ರೆಗೆ ದಾಖಲಾಗಿದ್ದ ಪ್ರಧಾನಮಂತ್ರಿ ನರೇಂದ್ರ ಮೋದಿಯವರ ತಾಯಿ ಹೀರಾ ಬೆನ್ ಅವರು ಶನಿವಾರ ಆಸ್ಪತ್ರೆಯಿಂದ ಬಿಡುಗಡೆಗೊಂಡಿದ್ದಾರೆ.

95 ವರ್ಷದ ಹೀರಾ ಬೆನ್ ರಿಗೆ ಎದೆ ನೋವು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಬುಧವಾರ ಗಾಂಧಿ ನಗರದ ಸರ್ಕಾರಿ ಆಸ್ಪತ್ರೆಗೆ ದಾಖಲಾಗಿದ್ದರು. ಆಸ್ಪತ್ರೆಗೆ ದಾಖಲಾದ ನಂತರ ಉಸಿರಾಟ ಸಮಸ್ಯೆ ಇರುವುದಾಗಿ ತಿಳಿದುಬಂದ ಹಿನ್ನೆಲೆಯಲ್ಲಿ ಎಕ್ಸ್ ರೇ, ರಕ್ತದೊತ್ತಡ ಹಾಗೂ ಇಸಿಜಿ ಪರೀಕ್ಷೆಯನ್ನು ವೈದ್ಯರು ಮಾಡಿದ್ದರು. ನಂತರ ವರದಿಯಲ್ಲಿ ಗಂಭೀರ ಸಮಸ್ಯೆಗಳಿಲ್ಲದಿರುವುದಾಗಿ ವೈದ್ಯರು ತಿಳಿಸಿದ್ದರು.

ಇದೀಗ ಹೀರಾ ಬೆನ್ ಅವರು ಚೇತರಿಸಿಕೊಂಡಿದ್ದು, ಆಸ್ಪತ್ರೆಯಿಂದ ಬಿಡುಗಡೆಗೊಂಡಿದ್ದಾರೆ. ಇಲ್ಲದೆ, ಆಸ್ಪತ್ರೆಯಿಂದಲೇ ಪ್ರಧಾನಿ ಮೋದಿಯವರಿಗೆ ಸಂದೇಶವನ್ನು ನೀಡಿದ್ದು, ನನ್ನ ಆರೋಗ್ಯದ ಬಗ್ಗೆ ಚಿಂತಿಸಬೇಡ. ನಿನ್ನ ಗುರಿಯತ್ತ ಮುನ್ನಡೆ ಎಂದು ಹೇಳಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com