ನವದೆಹಲಿ: ಭಾನುವಾರ ಪ್ರಧಾನಿ ನರೇಂದ್ರ ಮೋದಿ ತಮ್ಮ ಮನ್ ಕೀ ಬಾತ್ ನಲ್ಲಿ ಪರೀಕ್ಷೆ ಬರೆಯುತ್ತಿರುವ ವಿದ್ಯಾರ್ಥಿಗಳು ಪರೀಕ್ಷೆಯನ್ನು ಹೇಗೆ ಎದುರಿಸಬೇಕು ಎಂದು ಹೇಳಿದ್ದರು. ಪ್ರಸ್ತುತ ಕಾರ್ಯಕ್ರಮದಲ್ಲಿ ಮಾಜಿ ಕ್ರಿಕೆಟಿಗ ಸಚಿನ್ ತೆಂಡೂಲ್ಕರ್, ಮಾಜಿ ಚೆಸ್ ಚಾಂಪಿಯನ್ ವಿಶ್ವನಾಥನ್ ಆನಂದ್, ವಿಜ್ಞಾನಿ ಸಿಎನ್ ಆರ್ ರಾವ್ ಅವರಿಂದಲೂ ಮಾತುಗಳನ್ನಾಡಿಸಿದ್ದು ವಿಶೇಷವಾಗಿತ್ತು. ವಿದ್ಯಾರ್ಥಿಗಳ ಬಗ್ಗೆ ಅಷ್ಟೆಲ್ಲಾ ಕಾಳಜಿ ತೋರಿಸಿದ್ದ ಮೋದಿಯವರು ಹೈದ್ರಾಬಾದ್ ವಿಶ್ವವಿದ್ಯಾನಿಲಯ ಮತ್ತು ಜೆಎನ್ಯುವಿನಲ್ಲಿ ನಡೆದ ಘಟನೆಗಳ ಬಗ್ಗೆ ಮೌನ ವಹಿಸಿರುವುದು ಯಾಕೆ ಎಂದು ವಿಪಕ್ಷಗಳು ಪ್ರಶ್ನಿಸಿವೆ.