ಜಾಟ್ ಪ್ರತಿಭಟನೆ ವೇಳೆ ಸರ್ಕಾರಿ ಆಸ್ತಿ ಹಾನಿ: 14 ಮಂದಿ ಬಂಧನ

ಜಾಟ್ ಸಮುದಾಯ ಮೀಸಲಾತಿಗೆ ಆಗ್ರಹಿಸಿ ಪ್ರತಿಭಟನೆ ನಡೆಸುತ್ತಿದ್ದ ವೇಳೆ ಸರ್ಕಾರಿ ಆಸ್ತಿ ಹಾನಿ ಮಾಡಿದ ಆರೋಪದ ಮೇಲೆ...
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ
ಚಂಡೀಗಢ: ಜಾಟ್ ಸಮುದಾಯ ಮೀಸಲಾತಿಗೆ ಆಗ್ರಹಿಸಿ ಪ್ರತಿಭಟನೆ ನಡೆಸುತ್ತಿದ್ದ ವೇಳೆ ಸರ್ಕಾರಿ ಆಸ್ತಿ ಹಾನಿ ಮಾಡಿದ ಆರೋಪದ ಮೇಲೆ 14 ಮಂದಿಯನ್ನು ಪೊಲೀಸರು ಬಂಧಿಸಿದ್ದಾರೆ. 
ಉಚನಾ ಪ್ರದೇಶದಿಂದ 9 ಮಂದಿ, ಜುಲಾನದಿಂದ ಮೂವರು, ಸಾಫಿಡಾನ್, ಸಾಡರ್ ಜಿಂದ್ ನಿಂದ ಒಬ್ಬೊಬ್ಬರನ್ನು ಪೊಲೀಸರು ಬಂಧಿಸಿದ್ದು, ಪ್ರಕರಣ ದಾಖಲಿಸಿಕೊಂಡಿದ್ದಾರೆ. 
ಮುರ್ತಾಲ್ ನಲ್ಲಿ ಜಾಟ್ ಪ್ರತಿಭಟನೆ ವೇಳೆ ನನ್ನ ಮೇಲೆ ಸಾಮೂಹಿಕ ಅತ್ಯಾಚಾರವೆಸಗಲಾಗಿದೆ ಎಂದು ಮಹಿಳೆಯೊಬ್ಬರು ದೂರು ದಾಖಲಿಸಿದ್ದರು. ಈ ಹಿನ್ನಲೆಯಲ್ಲಿ ಮತ್ತಷ್ಟು ಪ್ರಕರಣಗಳು ನಡೆದಿರುವ ಬಗ್ಗೆ ತನಿಖೆ ನಡೆಸಲು ಮೂವರು ಮಹಿಳಾ ಪೊಲೀಸ್ ಅಧಿಕಾರಿಗಳನ್ನು ನೇಮಿಸಲಾಗಿತ್ತು. ಆದರೆ. ಈವರೆಗೆ ಇನ್ನು ಯಾವುದೇ ಹೊಸ ಪ್ರಕರಣ ದಾಖಲಾಗಿಲ್ಲ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com