ವಾಯುನೆಲೆ ಮೇಲೆ ಉಗ್ರರ ದಾಳಿ: ಸೇನಾಧಿಕಾರಿಗಳ ಜತೆ ಧೋವಲ್ ಚರ್ಚೆ

ಪಠಾಣ್ ಕೋಟ್ ಸೇನಾ ವಾಯುನೆಲೆ ಮೇಲೆ ಉಗ್ರರ ಗುಂಪು ದಾಳಿ ನಡೆಸಿರುವ ಹಿನ್ನೆಲೆಯಲ್ಲಿ ಇದೀಗ ರಾಷ್ಟ್ರೀಯ ಭದ್ರತಾ ಸಲಹೆಗಾರ ಅಜಿತ್ ಅವರು ಸಭೆಯನ್ನು ಏರ್ಪಡಿಸಿದ್ದು, ದಾಳಿ ಕುರಿತಂತೆ ಸಭೆಯಲ್ಲಿ ಶನಿವಾರ ಚರ್ಚೆ ನಡೆಸಲಿದ್ದಾರೆ...
ರಾಷ್ಟ್ರೀಯ ಭದ್ರತಾ ಸಲಹೆಗಾರ ಅಜಿತ್ ಧೋವಲ್ (ಸಂಗ್ರಹ ಚಿತ್ರ)
ರಾಷ್ಟ್ರೀಯ ಭದ್ರತಾ ಸಲಹೆಗಾರ ಅಜಿತ್ ಧೋವಲ್ (ಸಂಗ್ರಹ ಚಿತ್ರ)

ನವದೆಹಲಿ: ಪಠಾಣ್ ಕೋಟ್ ಸೇನಾ ವಾಯುನೆಲೆ ಮೇಲೆ ಉಗ್ರರ ಗುಂಪು ದಾಳಿ ನಡೆಸಿರುವ ಹಿನ್ನೆಲೆಯಲ್ಲಿ ಇದೀಗ ರಾಷ್ಟ್ರೀಯ ಭದ್ರತಾ ಸಲಹೆಗಾರ ಅಜಿತ್ ಧೋವಲ್ ಅವರು ಸಭೆಯನ್ನು ಏರ್ಪಡಿಸಿದ್ದು, ದಾಳಿ ಕುರಿತಂತೆ ಸಭೆಯಲ್ಲಿ ಶನಿವಾರ ಚರ್ಚೆ ನಡೆಸಲಿದ್ದಾರೆ.

ಪ್ರಧಾನಮಂತ್ರಿ ನರೇಂದ್ರ ಮೋದಿ ನೇತೃತ್ವದಲ್ಲಿ ರಾಷ್ಟ್ರೀಯ ಭದ್ರತಾ ಸಲಹೆಗಾರ ಅಜಿತ್ ಧೋವಲ್, ಕೇಂದ್ರ ಗೃಹ ಇಲಾಖೆ ಅಧಿಕಾರಿಗಳು, ಗುಪ್ತಚರ ಇಲಾಖೆ, ಭಾರತೀಯ ಸೇನಾಧಿಕಾರಿಗಳು ಚರ್ಚೆ ನಡೆಸಲಿದ್ದಾರೆ.

ಹೊಸವರ್ಷಾಚರಣೆ ದಿನದಂದೇ ದಾಳಿ ನಡೆಸಲು ಸಂಚು ರೂಪಿಸಿದ್ದ ಉಗ್ರರ ಗುಂಪೊಂದಿ ಇಂದು ಬೆಳಿಗ್ಗೆ 4.30ರ ಸುಮಾರಿಗೆ ಪಂಜಾಬ್ ನ ಗುರುದಾಸ್ ಪುರದ ಪಠಾಣ್ ಕೋಟ್ ವಾಯುಸೇನಾ ನೆಲೆಯ ಮೇಲೆ ದಾಳಿ ನಡೆಸಿತ್ತು. ಉಗ್ರರ ದಾಳಿಗೆ ಭಾರತೀಯ ಸೇನೆ ಪ್ರತ್ಯುತ್ತರ ನೀಡುತ್ತಿದ್ದು, ಈಗಾಗಲೇ ನಾಲ್ವರು ಉಗ್ರರನ್ನು ಹತ್ಯೆ ಮಾಡಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com