ಉಗ್ರರ ದಾಳಿ ಸಹಿಸಲ್ಲ, ಪ್ರತ್ಯುತ್ತರ ನೀಡುತ್ತೇವೆ: ರಾಜನಾಥ ಸಿಂಗ್

ಉಗ್ರರ ದಾಳಿಯನ್ನು ಭಾರತ ಎಂದಿಗೂ ಸಹಿಸುವುದಿಲ್ಲ. ದಾಳಿಗೆ ಪ್ರತ್ಯುತ್ತರ ನೀಡಿಯೇ ತೀರುತ್ತೇವೆಂದು ಕೇಂದ್ರ ಗೃಹ ಸಚಿವ ರಾಜನಾಥ್ ಸಿಂಗ್ ಅವರು ಶನಿವಾರ ಹೇಳಿದ್ದಾರೆ...
ಕೇಂದ್ರ ಗೃಹ ಸಚಿವ ರಾಜನಾಥ್ ಸಿಂಗ್(ಸಂಗ್ರಹ ಚಿತ್ರ)
ಕೇಂದ್ರ ಗೃಹ ಸಚಿವ ರಾಜನಾಥ್ ಸಿಂಗ್(ಸಂಗ್ರಹ ಚಿತ್ರ)

ನವದೆಹಲಿ: ಉಗ್ರರ ದಾಳಿಯನ್ನು ಭಾರತ ಎಂದಿಗೂ ಸಹಿಸುವುದಿಲ್ಲ. ದಾಳಿಗೆ ಪ್ರತ್ಯುತ್ತರ ನೀಡಿಯೇ ತೀರುತ್ತೇವೆಂದು ಕೇಂದ್ರ ಗೃಹ ಸಚಿವ ರಾಜನಾಥ್ ಸಿಂಗ್ ಅವರು ಶನಿವಾರ ಹೇಳಿದ್ದಾರೆ.

ಪಠಾಣ್ ಕೋಟ್ ಸೇನಾ ವಾಯುನೆಲೆ ಮೇಲೆ ಉಗ್ರರು ದಾಳಿಸುವುದರ ಕುರಿತಂತೆ ಪ್ರತಿಕ್ರಿಯೆ ನೀಡಿರುವ ಅವರು, ಭಾರತ ಪಾಕಿಸ್ತಾನ ಸೇರಿ ಇತರೆ ದೇಶಗಳೊಂದಿಗೆ ಉತ್ತಮ ಗೆಳತನ ಹಾಗೂ ಉತ್ತಮ ಸಂಬಂಧವನ್ನು ಬಯಸುತ್ತದೆ. ಪಾಕಿಸ್ತಾನ ನಮ್ಮ ನೆರೆರಾಷ್ಟ್ರವಾಗಿದ್ದು, ನಾನು ಶಾಂತಿಯನ್ನು ಬಯಸುತ್ತೇವೆ. ಉಗ್ರರ ದಾಳಿಯನ್ನು ನಾವು ಸಹಿಸುವುದಿಲ್ಲ. ದಾಳಿಗೆ ಪ್ರತ್ಯುತ್ತರ ನೀಡುತ್ತೇವೆಂದು ಹೇಳಿದ್ದಾರೆ. ಅಲ್ಲದೆ, ದೇಶದಾದ್ಯಂತ ಬಿಗಿ ಭದ್ರತೆ ನಿಯೋಜಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.

ಹೊಸವರ್ಷಾಚರಣೆ ದಿನದಂದೇ ದಾಳಿ ನಡೆಸಲು ಸಂಚು ರೂಪಿಸಿದ್ದ ಉಗ್ರರ ಗುಂಪೊಂದು, 5 ದಿನಗಳ ಹಿಂದಷ್ಟೇ ಜಮ್ಮು ಮತ್ತು ಕಾಶ್ಮೀರದ ಗಡಿ ಮೂಲಕ ಭಾರತಕ್ಕೆ ಬಂದಿತ್ತು. ಇದರಂತೆ ಇಂದು ಬೆಳಿಗ್ಗೆ 4.30ರ ಸುಮಾರಿಗೆ ಪಂಜಾಬ್ ನ ಗುರುದಾಸ್ ಪುರದ ಪಠಾಣ್ ಕೋಟ್ ವಾಯುಸೇನಾ ನೆಲೆಯ ಮೇಲೆ ದಾಳಿ ನಡೆಸಿದೆ. ಉಗ್ರರ ದಾಳಿಗೆ ಭಾರತೀಯ ಸೇನೆ ಪ್ರತ್ಯುತ್ತರ ನೀಡುತ್ತಿದ್ದು, ಈಗಾಗಲೇ ನಾಲ್ವರು ಉಗ್ರರನ್ನು ಹತ್ಯೆ ಮಾಡಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com