ದೆಹಲಿ ರೈಲು ನಿಲ್ದಾಣಕ್ಕೆ ಬಾಂಬ್ ಬೆದರಿಕೆ ಕರೆ: ದ್ವಿಗುಣಗೊಂಡ ಭದ್ರತಾ ವ್ಯವಸ್ಥೆ

ದೆಹಲಿ ಲಖನೌ- ಶತಾಬ್ದಿ ಎಕ್ಸ್ ಪ್ರೆಸ್ ನಲ್ಲಿ ಬಾಂಬ್ ಇರುವುದಾಗಿ ಬೆದರಿಕೆ ಕರೆ ಬಂದ ಹಿನ್ನೆಲೆಯಲ್ಲಿ ನವದೆಹಲಿಯ ರೈಲ್ವೇ ನಿಲ್ದಾಣದಲ್ಲಿ ಭದ್ರತೆಯನ್ನು ದುಪ್ಪಟ್ಟುಗೊಳಿಸಲಾಗಿದೆ.
ದೆಹಲಿ ರೈಲು ನಿಲ್ದಾಣ(ಸಂಗ್ರಹ ಚಿತ್ರ)
ದೆಹಲಿ ರೈಲು ನಿಲ್ದಾಣ(ಸಂಗ್ರಹ ಚಿತ್ರ)

ನವದೆಹಲಿ: ದೆಹಲಿ ಲಖನೌ- ಶತಾಬ್ದಿ ಎಕ್ಸ್ ಪ್ರೆಸ್ ನಲ್ಲಿ ಬಾಂಬ್ ಇರುವುದಾಗಿ ಬೆದರಿಕೆ ಕರೆ ಬಂದ ಹಿನ್ನೆಲೆಯಲ್ಲಿ ನವದೆಹಲಿಯ ರೈಲ್ವೇ ನಿಲ್ದಾಣದಲ್ಲಿ ಭದ್ರತೆಯನ್ನು ದುಪ್ಪಟ್ಟುಗೊಳಿಸಲಾಗಿದೆ.
ಬೆದರಿಕೆ ಕರೆ ಬಂದ ನಂತರ ಗಾಜಿಯಾಬಾದ್ ಬಳಿ ದೆಹಲಿ ಲಖನೌ- ಶತಾಬ್ದಿ ರೈಲಿನಲ್ಲಿದ್ದ ಪ್ರಯಾಣಿಕರನ್ನು ಹೊರಕರೆತರಲಾಗಿದೆ. ಬೆಳಿಗ್ಗೆ 6 :30 ರ ವೇಳೆಗೆ ಬಾಂಬ್ ಬೆದರಿಕೆ ಕರೆ ಬಗ್ಗೆ ದೆಹಲಿ ಪೊಲೀಸರಿಂದ ಮಾಹಿತಿ ದೊರೆತಿದ್ದು ಗಾಜಿಯಾಬಾದ್ ರೈಲ್ವೆ ನಿಲ್ದಾಣವನ್ನು ಸಂಪೂರ್ಣವಾಗಿ ತಪಾಸಣೆ ನಡೆಸಿ ಭದ್ರತೆಯನ್ನು ದ್ವಿಗುಣಗೊಳಿಸಲಾಗಿದೆ ಎಂದು ರೈಲ್ವೆ ಅಧಿಕಾರಿಯೊಬ್ಬರು ಮಾಹಿತಿ ನೀಡಿದ್ದಾರೆ.
ನಿಜಾಮುದ್ದೀನ್ ಹಾಗೂ ನವದೆಹಲಿ ರೈಲ್ವೆ ನಿಲ್ದಾಣಗಳಲ್ಲಿ ಬಾಂಬ್ ನಿಷ್ಕ್ರಿಯ ದಳದ ಸಿಬ್ಬಂದಿಗಳನ್ನು ನಿಯೋಜಿಸಲಾಗಿದೆ, ಪ್ರಯಾಣಿಕರು ಆತಂಕ ಪಡುವ ಅವಶ್ಯಕತೆ ಇಲ್ಲ ಎಂದು ರೈಲ್ವೆ ಅಧಿಕಾರಿಗಳು ತಿಳಿಸಿದ್ದಾರೆ. ಪಠಾಣ್ ಕೋಟ್ ನಲ್ಲಿನ ವಾಯುನೆಲೆ ಮೇಲೆ ಭಯೋತ್ಪಾದಕರ ದಾಳಿ ನಡೆದ ಬೆನ್ನಲ್ಲೇ ದೆಹಲಿ ರೈಲ್ವೆ ನಿಲ್ದಾಣಕ್ಕೂ ಬಾಂಬ್ ಬೆದರಿಕೆ ಕರೆ ಬಂದಿರುವುದು ಆತಂಕಕ್ಕೆ ಕಾರಣವಾಗಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com