ಈಶಾನ್ಯ ರಾಜ್ಯಗಳಲ್ಲಿ ಪ್ರಬಲ ಭೂಕಂಪ: 6 ಸಾವು, 150 ಗಾಯ

ಈಶಾನ್ಯ ರಾಜ್ಯಗಳಾದ ಮಣಿಪುರದಲ್ಲಿ ಸಂಭವಿಸಿದ ಪ್ರಬಲ ಭೂಕಂಪದಲ್ಲಿ 6 ಮಂದಿ ಸಾವನ್ನಪ್ಪಿದ್ದು, 100ಕ್ಕೂ ಹೆಚ್ಚು ಜನರಿಗೆ ಗಾಯಗಳಾಗಿವೆ...
ಭೂಕಂಪ
ಭೂಕಂಪ

ಇಂಪಾಲ/ಮಣಿಪುರ: ಈಶಾನ್ಯ ರಾಜ್ಯಗಳಾದ ಮಣಿಪುರದಲ್ಲಿ ಸಂಭವಿಸಿದ ಪ್ರಬಲ ಭೂಕಂಪದಲ್ಲಿ 6 ಮಂದಿ ಸಾವನ್ನಪ್ಪಿದ್ದು, 100ಕ್ಕೂ ಹೆಚ್ಚು ಜನರಿಗೆ ಗಾಯಗಳಾಗಿವೆ.

ಸೋಮವಾರ ಬೆಳಗ್ಗೆ 4.36ರ ಸುಮಾರಿನಲ್ಲಿ ಭೂಕಂಪ ಸಂಭವಿಸಿದ್ದು, ರಿಕ್ಟರ್ ಮಾಪನದಲ್ಲಿ ಕಂಪನದ ತೀವ್ರತೆ 6.7ರಷ್ಟು ದಾಖಲಾಗಿದೆ. ಭೂಕಂಪದ ತೀವ್ರತೆಗೆ ಹಲವು ಕಟ್ಟಡಗಳಿಗೆ ಹಾನಿಯಾಗಿದೆ.

ಅಸ್ಸಾಂ, ಬಿಹಾರ, ನಾಗಲ್ಯಾಂಡ್ ಹಾಗೂ ಪಶ್ಟಿಮಬಂಗಾಳದಲ್ಲೂ ಭೂಕಂಪವಾಗಿದೆ.

ಭೂಕಂಪನ ಸಂಭವಿಸುತ್ತಿದ್ದಂತೆ ಟ್ವೀಟ್ ಮಾಡಿರುವ ಪ್ರಧಾನಿ ಮೋದಿ ಅವರು ಎನ್ಡಿಆರ್ಎಫ್ ತಂಡಕ್ಕೆ ಗುವಾಟಿಗೆ ತೆರಳುವಂತೆ ಸೂಚಿಸಿದ್ದಾರೆ. ಸದ್ಯ ಅಸ್ಸಾಂನಲ್ಲಿರುವ ಕೇಂದ್ರ ಗೃಹ ಸಚಿವ ರಾಜನಾಥ್ ಸಿಂಗ್ ಅವರನ್ನು ಭೂಕಂಪನದ ಕುರಿತು ಮಾಹಿತಿ ಪಡೆದು, ನೆರವಾಗುವಂತೆ ಸೂಚಿಸಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com