ಪಠಾಣ್ ಕೋಟ್ ಉಗ್ರ ದಾಳಿ ವಿಷಯದಲ್ಲಿ ಪ್ರಧಾನಿ ಮೋದಿ ಪ್ರತಿಪಕ್ಷಗಳ ಸಲಹೆ ಪಡೆಯಬೇಕು: ಕಾಂಗ್ರೆಸ್

ಪಠಾಣ್ ಕೋಟ್ ವಾಯು ನೆಲೆ ಮೇಲೆ ನಡೆದಿರುವ ಭಯೋತ್ಪಾದಕ ದಾಳಿ ಘಟನೆಗೆ ಸಂಬಂಧಿಸಿದಂತೆ ಪ್ರಧಾನಿ ನರೇಂದ್ರ ಮೋದಿ ಪ್ರತಿಪಕ್ಷಗಳ ಸಲಹೆ ಪಡೆಯಬೇಕು ಎಂದು ಕಾಂಗ್ರೆಸ್ ಅಭಿಪ್ರಾಯಪಟ್ಟಿದೆ.
ಕಾಂಗ್ರೆಸ್ ವಕ್ತಾರ ಆನಂದ್ ಶರ್ಮಾ
ಕಾಂಗ್ರೆಸ್ ವಕ್ತಾರ ಆನಂದ್ ಶರ್ಮಾ
Updated on: 

ನವದೆಹಲಿ: ಪಠಾಣ್ ಕೋಟ್ ವಾಯು ನೆಲೆ ಮೇಲೆ ನಡೆದಿರುವ ಭಯೋತ್ಪಾದಕ ದಾಳಿ ಘಟನೆಗೆ ಸಂಬಂಧಿಸಿದಂತೆ ಪ್ರಧಾನಿ ನರೇಂದ್ರ ಮೋದಿ ಪ್ರತಿಪಕ್ಷಗಳ ಸಲಹೆ ಪಡೆಯಬೇಕು ಎಂದು ಕಾಂಗ್ರೆಸ್ ಅಭಿಪ್ರಾಯಪಟ್ಟಿದೆ.
ಭಯೋತ್ಪಾದಕ ದಾಳಿ ಘಟನೆ ವಿಷಯದಲ್ಲಿ ಪ್ರಧಾನಿ ಮೋದಿ ಪ್ರತಿಪಕ್ಷಗಳನ್ನು ವಿಶ್ವಾಸಕ್ಕೆ ತೆಗೆದುಕೊಂಡು ಪ್ರತಿಪಕ್ಷಗಳ ಸಲಹೆ ಕೇಳುವುದು ಸೂಕ್ತ ಎಂದು ಕಾಂಗ್ರೆಸ್ ವಕ್ತಾರ ಆನಂದ್ ಶರ್ಮಾ ಹೇಳಿದ್ದಾರೆ. ಪಠಾಣ್ ಕೋಟ್ ನ ವಾಯು ನೆಲೆ ಮೇಲೆ ನಡೆದ ಭಯೋತ್ಪಾದಕ ದಾಳಿಯಲ್ಲಿ  7 ಮಂದಿ ಭದ್ರತಾ ಸಿಬ್ಬಂದಿಗಳು ಸಾವನ್ನಪ್ಪಿದ್ದರು.  
ಕಾಂಗ್ರೆಸ್ ಈ ದಾಳಿಯನ್ನು ದೇಶದ ಮೇಲೆ ನಡೆದ ದಾಳಿ ಎಂದು ಹೇಳಿದ್ದು, ಮೋದಿ ಈ ವಿಷಯದಲ್ಲಿ ಪ್ರತಿಪಕ್ಷಗಳನ್ನು ವಿಶ್ವಾಸಕ್ಕೆ ತೆಗೆದುಕೊಳ್ಳಬೇಕು ಎಂದು ಒತ್ತಾಯಿಸಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com