
ಭೋಪಾಲ್: ಲ್ಯಾಂಡಿಂಗ್ ವೇಳೆ ಏರ್ ಇಂಡಿಯಾ ವಿಮಾನ ಟೈರ್ ಸ್ಫೋಟಗೊಂಡಿರುವ ಘಟನೆ ರಾಜಭೋಜ್ ಏರ್ ಪೋರ್ಟ್ ನಲ್ಲಿ ಬುಧವಾರ ನಡೆದಿದೆ.
ನವದೆಹಲಿಯಿಂದ ಭೂಪಾಲ್ ಹೋಗುತ್ತಿದ್ದ ವಿಮಾನವು ಇಂದು ಬೆಳಗ್ಗೆ 7.30ರ ಸುಮಾರಿಗೆ ಭೂಪಾಲ್ ನ ರಾಜಭೋಜ್ ವಿಮಾನ ನಿಲ್ದಾಣಕ್ಕೆ ತಲುಪಿತ್ತು. ಈ ವೇಳೆ ವಿಮಾನ ಲ್ಯಾಂಡಿಂಗ್ ಆಗುತ್ತಿದ್ದಂತೆ ವಿಮಾನದ ಟೈರ್ ಸ್ಪೋಟಗೊಂಡಿದೆ. ಪರಿಣಾಮ ವಿಮಾನದ ಕೆಲವು ಪ್ರಯಾಣಿಕರಿಗೆ ಗಾಯಗಳಾಗಿವೆ ಎಂದು ಹೇಳಲಾಗುತ್ತಿದೆ.
ಟೈರ್ ಸ್ಪೋಟಗೊಳ್ಳುತ್ತಿದಂತೆ ಸ್ಥಳಕ್ಕಾಗಮಿಸಿದ ಅಧಿಕಾರಿಗಳು ಪ್ರಯಾಣಿಕರನ್ನು ಸುರಕ್ಷಿತವಾಗಿ ಕೆಳಗಿಳಿಸಿದರು. ಘಟನೆಯಲ್ಲಿ ಯಾವುದೇ ಸಾವುನೋವುಗಳು ಸಂಭವಿಸಿಲ್ಲ ಎಂದು ತಿಳಿದುಬಂದಿದೆ.
Advertisement